ಮಹಾರಾಷ್ಟ್ರ ಸರ್ಕಾರದ ಲಾಕ್‌ಡೌನ್ ಕ್ರಮ ಸ್ವಾಗತಿಸಿದ ವಿಪಕ್ಷ ಬಿಜೆಪಿ

ಮುಂಬೈ, ಏಪ್ರಿಲ್ 5: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾಗಶಃ ಲಾಕ್​ಡೌನ್ ಮಾಡಲು ಉದ್ಧವ್ ಠಾಕ್ರೆ ಸರ್ಕಾರ ನಿರ್ಧರಿಸಿದೆ.

ಸೋಮವಾರ (ಏಪ್ರಿಲ್ 5) ದಿಂದ ಸಂಜೆ 8 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ವಾರದ ಕೊನೆಯಲ್ಲಿ ಅಂದರೆ ಭಾನುವಾರ ಸಂಪೂರ್ಣ ಲಾಕ್​​ಡೌನ್​ ಇರಲಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಅಲ್ಲದೇ ಇನ್ನೊಂದು ವಾರ ನೋಡಿಕೊಂಡು ಸಂಪೂರ್ಣ ಲಾಕ್​ಡೌನ್​ ಮಾಡಬೇಕೋ ಬೇಡವೋ ಎಂದು ತೀರ್ಮಾನಿಸಲಾಗುವುದು ಎಂದು ಮಹಾ ಸಿಎಂ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

Maharashtra Government Has Decided To Lockdown: BJP Welcomes

ಸಿಎಂ ಉದ್ಧವ್ ಠಾಕ್ರೆ ಅವರ ಲಾಕ್​ಡೌನ್ ನಿರ್ಧಾರವನ್ನು ಸ್ವಾಗತಿಸಿರುವ ಮಹಾರಾಷ್ಟ್ರದ ವಿರೋಧ ಪಕ್ಷ ಬಿಜೆಪಿ, ಲಾಕ್​ಡೌನ್​​ನಲ್ಲಿ ಬಡವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು, ಹೆಚ್ಚುತ್ತಿರುವ ವೈರಸ್ ತಡೆಗೆ ಲಾಕ್​ಡೌನ್ ನಿರ್ಧಾರ ಉತ್ತಮ. ಆದರೆ, ಲಾಕ್​ಡೌನ್​ನಿಂದ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ತೊಂದರೆ ಆಗಬಾರದು ಎಂದು ಎಚ್ಚರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+