ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಮಹಾರಾಷ್ಟ್ರ ಸರ್ಕಾರ

|
Google Oneindia Kannada News

ಮುಂಬೈ, ಡಿಸೆಂಬರ್ 21: ಮಹಾರಾಷ್ಟ್ರದ ಶಿವಸೇನಾ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರವು ರೈತರ ಎರಡು ಲಕ್ಷ ರೂಪಾಯಿ ಬೆಳೆ ಸಾಲಮನ್ನಾ ಮಾಡುವುದಾಗಿ ಘೊಷಿಸಿದೆ.

ಮಹಾರಾಷ್ಟ್ರ ವಿಧಾನಸಭೆ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ಘೋಷಣೆ ಮಾಡಿದ್ದಾರೆ.

ಸೆಪ್ಟೆಂಬರ್ 2019 ರ ವರೆಗಿನ ಎರಡು ಲಕ್ಷ ರೂಪಾಯಿ ಬೆಳೆಸಾಲವನ್ನು ಮನ್ನಾ ಮಾಡುವುದಾಗಿ ಹೇಳಿಸ ಸಿಎಂ ಉದ್ಧವ್ ಠಾಕ್ರೆ, ಈ ಸಾಲಮನ್ನಾ ಯೋಜನೆಗೆ 'ಮಹಾತ್ಮಾ ಜ್ಯೋತಿರಾವ್ ಫುಲೆ ಸಾಲಮನ್ನಾ ಯೋಜನೆ' ಎಂದು ಹೆಸರು ಎಂದರು.

Maharashtra Government Waive Off 2 Lakh Crop Loan Of Farmers

ಈ ಬೆಳೆಸಾಲವು ಬೇಷರತ್ ಆಗಿದ್ದು, ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಒದಗಿಸಲಾಗುವುದು ಎಂದು ಮಹಾರಾಷ್ಟ್ರ ಹಣಕಾಸು ಮಂತ್ರಿ ಜಯಂತ್ ಪಾಟೀಲ್ ಹೇಳಿದ್ದಾರೆ.

ಕೇವಲ 10 ರೂ.ಗೆ ಊಟ: ಯೋಜನೆ ಜಾರಿಗೊಳಿಸಿದ ಶಿವಸೇನಾಕೇವಲ 10 ರೂ.ಗೆ ಊಟ: ಯೋಜನೆ ಜಾರಿಗೊಳಿಸಿದ ಶಿವಸೇನಾ

ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ದೇವೇಂದ್ರ ಫಡ್ಣವೀಸ್, 'ಸರ್ಕಾರವು ಪೂರ್ಣ ಸಾಲ ಮನ್ನಾ ಮಾಡುವುದಾಗಿ ಹೇಳಿತ್ತು. ಆದರೆ ಅದನ್ನು ಈಡೇರಿಸಿಲ್ಲ' ಎಂದು ಹೇಳಿ, ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

English summary
Shiv Sena led Maharashtra coalition government promise to waive off 2 lakh rs crop loan of farmers unconditionally.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X