ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ: ರದ್ದಾಗಿದ್ದ ಮರಾಠಾ ಮೀಸಲಾತಿ ಮತ್ತೊಂದು ರೂಪದಲ್ಲಿ ಜಾರಿ

|
Google Oneindia Kannada News

ಮುಂಬೈ, ಜೂನ್ 01: ಸುಪ್ರೀಂಕೋರ್ಟ್ ಈಗಾಗಲೇ ಮಹಾರಾಷ್ಟ್ರದ ಪ್ರಬಲ ಸಮುದಾಯವಾದ ಮರಾಠ ಸಮುದಾಯದ ಹಿಂದುಳಿದ ವರ್ಗದ ಮೀಸಲಾತಿಯನ್ನು ರದ್ದುಗೊಳಿಸಿದೆ.

ಆದರೆ ಉದ್ಧವ್ ಠಾಕ್ರೆ ಸರ್ಕಾರ ಮತ್ತೊಂದು ರೂಪದಲ್ಲಿ ಆ ಮೀಸಲಾತಿಯನ್ನು ಜಾರಿಗೆ ತಂದಿದೆ.ಮರಾಠಿಗರಿಗೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕೋಟಾದಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ.

ಮರಾಠ ಸಮುದಾಯದ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂಮರಾಠ ಸಮುದಾಯದ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ

ಮಹಾರಾಷ್ಟ್ರ ಸರ್ಕಾರವು 2018ರಲ್ಲಿ ಮರಾಠ ಸಮುದಾಯಕ್ಕೆ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ನೌಕರಿಯಲ್ಲಿ ಶೇ.13ರಷ್ಟು ಒಬಿಸಿ ಮೀಸಲಾತಿ ನೀಡಿತ್ತು. ಆದರೆ ಮೀಸಲಾತಿ ಶೇ.50ರಷ್ಟು ಮೀರಬಾರದು ಎಂಬ ಕಾರಣಕ್ಕೆ 2021ರ ಮೇ 5 ರಂದು ಮರಾಠರ ಮೀಸಲಾತಿಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿತ್ತು.

Maharashtra Govt Allows 10 Percent Reservation For Maratha Students

ಅದಾದ ನಂತರ ಮರಾಠಿಗರಿಗೆ ಮೀಸಲಾತಿ ಕಲ್ಪಿಸಲೇಬೇಕೆಂಬ ಸರ್ಕಾರದ ಮುಂದೆ ತೀವ್ರ ಒತ್ತಡ ಹೇರಲಾಗಿತ್ತು, ಈ ಹಿನ್ನೆಲೆಯಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶದಿಂದ ತಪ್ಪಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ವರ್ಗಗಳಲ್ಲಿ ಮರಾಠಿಗರಿಗೆ ಶೇ.10ರಷ್ಟು ಮೀಸಲಾತಿಯನ್ನು ಕಲ್ಪಿಸಲು ನಿರ್ಧರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಮರಾಠ ಸಮುದಾಯದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.
ಒಟ್ಟಾರೆ ಮೀಸಲಾತಿ ಶೇ. 50ಕ್ಕಿಂತ ಹೆಚ್ಚು ಇರುವಂತಿಲ್ಲ. ಮರಾಠರಿಗೆ ಮೀಸಲಾತಿ ಕೊಟ್ಟರೆ ಮೀಸಲಾತಿ ಪ್ರಮಾಣ ಶೇ. 50 ಮೀರುತ್ತದೆ.

ಇದರಿಂದ ಸಮಾನತೆ ತತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಐವರು ಸದಸ್ಯರ ಸಾಂವಿಧಾನಿಕ ಸುಪ್ರೀಂ ನ್ಯಾಯಪೀಠ ಹೇಳಿದೆ. ನ್ಯಾ. ಅಶೋಕ್ ಭೂಷಣ್ ನೇತೃತ್ವದ ಈ ನ್ಯಾಯಪೀಠದಲ್ಲಿ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ್ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರಿದ್ದಾರೆ. 1992ರಲ್ಲಿ ಮಂಡಲ್ ಆಯೋಗದ ಪ್ರಕರಣ ಎಂದು ಖ್ಯಾತವಾಗಿದ್ದ ಇಂದ್ರಾ ಸಾಹನಿ ಪ್ರಕರಣದಲ್ಲಿ ಆಗಿನ 9 ಸದಸ್ಯರ ಸಾಂವಿಧಾನಿಕ ಸುಪ್ರೀಂ ನ್ಯಾಯಪೀಠ ಮೀಸಲಾತಿ ಶೇ. 50ಕ್ಕಿಂತ ಹೆಚ್ಚು ಇರಬಾರದು ಎಂದು ಮಹತ್ವದ ತೀರ್ಪು ನೀಡಿತ್ತು.

ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಇವತ್ತು ಸರ್ವೋಚ್ಚ ನ್ಯಾಯಾಲಯವು ಮರಾಠ ಮೀಸಲಾತಿಯ ಸಿಂಧುತ್ವವನ್ನು ಪ್ರಶ್ನಿಸಿ ರದ್ದುಗೊಳಿಸಿತ್ತು.

2018ರಲ್ಲಿ ಮಹಾರಾಷ್ಟ್ರ ಸರ್ಕಾರ ಮಹಾರಾಷ್ಟ್ರ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಕಾಯ್ದೆ (SEBC Act) ಜಾರಿಗೆ ತಂದಿತು.

ಅದರಂತೆ, ಮಹಾರಾಷ್ಟ್ರದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಉದ್ಯೋಗಿಗಳಲ್ಲಿ ಮರಾಠ ಸಮುದಾಯಕ್ಕೆ ಶೇ. 16ರಷ್ಟು ಮೀಸಲಾತಿ ಒದಗಿಸಿತ್ತು. ಬಾಂಬೆ ಹೈಕೋರ್ಟ್ ಕೂಡ ಈ ಕಾಯ್ದೆಯ ಸಿಂಧುತ್ವವನ್ನ ಎತ್ತಿ ಹಿಡಿಯಿತಾದರೂ ಮರಾಠ ಸಮುದಾಯಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಶೇ. 12 ಮತ್ತು ಸರ್ಕಾರಿ ಉದ್ಯೋಗಿಗಳಲ್ಲಿ ಶೇ. 13 ಮೀಸಲಾತಿ ಮಾತ್ರ ಸಾಕು ಎಂದು ತೀರ್ಪು ಕೊಟ್ಟಿತು.

English summary
After the Supreme Court scrapped the Maratha quota, the Maharashtra government has now allowed Marathas to avail benefits of 10 per cent reservation in education and government jobs under the Economically Weaker Sections (EWS).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X