ಕೊವಿಡ್ 19: ಮಹಾರಾಷ್ಟ್ರದಲ್ಲಿ ಡಿಸೆಂಬರ್ 22 ರಿಂದ ರಾತ್ರಿ ಕರ್ಫ್ಯೂ ಜಾರಿ
ಮುಂಬೈ,ಡಿಸೆಂಬರ್ 21: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಜನವರಿ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಮಾಡಲಾಗಿದೆ. ರಾತ್ರಿ 11ರಿಂದ ಬೆಳಗ್ಗೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಕರ್ಫ್ಯೂ ಡಿಸೆಂಬರ್ 22ರಿಂದ ಆರಂಭವಾಗಲಿದೆ.
ಮಹಾರಾಷ್ಟ್ರದಲ್ಲಿ ಇಂದು 3811 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು 18,96,518 ಮಂದಿ ಕೊರೊನಾ ಸೋಂಕಿತರಿದ್ದಾರೆ. 17.84 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
ನಿನ್ನೆ 98 ಮಂದಿ ಮೃತಪಟ್ಟಿದ್ದು, ಇದುವರೆಗೆ 48,746 ಮಂದಿ ಸಾವನ್ನಪ್ಪಿದಂತಾಗಿದೆ. ರಾಜ್ಯದಲ್ಲಿ ಈಗ 62,743 ಸಕ್ರಿಯ ಪ್ರಕರಣಗಳಿವೆ. ಮುಂಬೈನಲ್ಲಿ 586 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು 2,86,850 ಪ್ರಕರಣಗಳಿವೆ.

ಮುಂದಿನ ಆರು ತಿಂಗಳುಗಳ ಕಾಲ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚನೆ ನೀಡಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 24,337 ಹೊಸ ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ. ಭಾನುವಾರದಂದು 333 ಮಂದಿ ಕೋವಿಡ್ ಸೋಂಕಿತರು ಬಲಿಯಾಗಿದ್ದಾರೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 1,45,810ಕ್ಕೆ ತಲುಪಿದೆ.
ಭಾನುವಾರ 25,709 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ವರದಿಯಾಗಿದೆ. ಈ ಮೂಲಕ ಒಟ್ಟು ಚೇತರಿಕೆಯ ಸಂಖ್ಯೆ 96,06,111 ಏರಿಕೆಯಾಗಿದೆ. ಇದುವರೆಗೂ ದೇಶದಲ್ಲಿ ಒಟ್ಟು 1,00,55,560 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು 3,03,639ಕ್ಕೆ ತಗ್ಗಿವೆ.












Click it and Unblock the Notifications