ಮಹಾರಾಷ್ಟ್ರ: ಕೊರೊನಾ ಲಾಕ್‌ಡೌನ್ ನಿರ್ಬಂಧ ಜನವರಿ 31ರವರೆಗೆ ವಿಸ್ತರಣೆ

ಮುಂಬೈ, ಡಿಸೆಂಬರ್ 30: ಮಹಾರಾಷ್ಟ್ರದಲ್ಲಿ ಜನವರಿ 31ರವರೆಗೂ ಲಾಕ್‌ಡೌನ್ ನಿರ್ಬಂಧವನ್ನು ವಿಸ್ತರಿಸಲಾಗಿದೆ.

ದೇಶದಲ್ಲಿ 20ಕ್ಕೂ ಹೆಚ್ಚು ಮಂದಿಯಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಸೃಷ್ಟಿಯಾಗದಂತೆ ನೋಡಿಕೊಳ್ಳಲು ಲಾಕ್‌ಡೌನ್ ನಿಯಮವನ್ನು ವಿಸ್ತರಣೆ ಮಾಡಿದ್ದಾರೆ.

ವೈರಸ್ ಹರಡುವುದನ್ನು ತಡೆಯಲು ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಂಕ್ರಾಮಿಕ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಲಾಕ್‌ಡೌನ್ ಅನ್ನು ಜನವರಿ 31 ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.

Maharashtra Govt Extends Covid-19 Lockdown Restrictions In State Till January 31

ಕಳೆದ ತಿಂಗಳುಗಳಿಂದ ಮಹಾರಾಷ್ಟ್ರ ಸರ್ಕಾರ ಕೆಲವು ವಲಯಗಳ ಮೇಲಿನ ನಿರ್ಬಂಧಗಳನ್ನು ಸಡಿಲಗೊಳಿಸಿತ್ತು. ಧಾರ್ಮಿಕ ಸ್ಥಳಗಳಿಗೆ ಜನರು ತೆರಳು ಕೆಲ ತಿಂಗಳ ಹಿಂದಷ್ಟೇ ಅನುಮತಿ ನತೀಡಿತ್ತು. 9-12ನೇ ತರಗತಿ ಮಕ್ಕಳು ಶಾಲೆ-ಕಾಲೇಜುಗಳಿಗೆ ತೆರಳಲು ಅವಕಾಶ ನೀಡಿತ್ತು.

ಕೋವಿಡ್ ಬಗ್ಗೆ ಪ್ರಸ್ತುತ ಇರುವ ಎಲ್ಲಾ ಮಾರ್ಗಸೂಚಿಗಳು ಮುಂದುವರಿಯಲಿವೆ ಎಂದು ಆದೇಶದಲ್ಲಿ ಸರ್ಕಾರ ತಿಳಿಸಿದೆ. ದೇಶದಲ್ಲಿ ಕೊರೊನಾದ ಹೊಸ ರೂಪಾಂತರಿ ತಳಿಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+