• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ಡಿಸೆಂಬರ್.31ರವರೆಗೂ ಲಾಕ್ ಡೌನ್ ವಿಸ್ತರಣೆ!

|

ಮುಂಬೈ, ನವೆಂಬರ್.27: ನೊವೆಲ್ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಡಿಸೆಂಬರ್.31ರವರೆಗೂ ವಿಸ್ತರಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

ಡಿಸೆಂಬರ್.31ರ ಮಧ್ಯರಾತ್ರಿವರೆಗೂ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಶುಕ್ರವಾರ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಕೆಲ ದಿನಗಳಿಂದ ಕೊವಿಡ್-19 ನಿಯಂತ್ರಿಸುವ ಉದ್ದೇಶದಿಂದ ಹಲವು ರೀತಿಯ ನಿಯಮಗಳನ್ನು ಜಾರಿಗೊಳಿಸಲಾಗಿತ್ತು.

ಪೋಷಕರ ಪ್ರಶ್ನೆ: ಮಕ್ಕಳಿಗೂ ಕೊರೊನಾ ಲಸಿಕೆ ಕಡ್ಡಾಯವೇ?

"ಕಾರ್ಯಾಚರಣೆ ಮತ್ತೆ ಆರಂಭ" ಎಂಬ ಗುರಿಯನ್ನಿಟ್ಟುಕೊಂಡು ಕಾಲ ಕಾಲಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡುವುದಕ್ಕೆ ಸರ್ಕಾರವು ತೀರ್ಮಾನಿಸಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆಯುವುದಕ್ಕೆ ಈಗಾಗಲೇ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಈ ವರ್ಷಾಂತ್ಯದವರೆಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಸರ್ಕಾರವು ಕಳೆದ ವಾರವೇ ಅಧಿಕೃತವಾಗಿ ಆದೇಶ ಹೊರಿಡಿಸಿದೆ.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಕಂಡೀಷನ್:

ಮಹಾರಾಷ್ಟ್ರದಲ್ಲಿ ತಗ್ಗಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಮತ್ತೆ ಏರುಮುಖವಾಗಿ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 6185 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 18,08,550ಕ್ಕೆ ಏರಿಕೆಯಾಗಿದೆ. 85 ಮಂದಿ ಒಂದೇ ದಿನ ಮಹಾಮಾರಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆಯು 46,898ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 4089 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 16,72,627 ಸೋಂಕಿತರು ಆಸ್ಪತ್ರೆಗಳಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 87,969 ಸಕ್ರಿಯೆ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

English summary
Maharashtra Govt Is Extend Coronavirus Lockdown Restrictions Till Dec.31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X