• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂಗೆ ನಿರ್ಧಾರ

|

ಮುಂಬೈ,ಫೆಬ್ರವರಿ 21:ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕರ್ಫ್ಯೂ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕರ್ಫ್ಯೂ ಸಮಯದಲ್ಲಿ, ಮದುವೆ ಸಭಾಂಗಣಗಳು, ಮಾರುಕಟ್ಟೆಗಳು, ಸಿನೆಮಾ ಹಾಲ್‌ಗಳು ಮತ್ತು ಜನಸಂದಣಿಯು ಸೇರುವ ಇತರ ಸ್ಥಳಗಳೆಲ್ಲವೂ ಮುಚ್ಚಲ್ಪಡುತ್ತವೆ. ತರಕಾರಿ ಮಾರುಕಟ್ಟೆಗಳನ್ನುಸಹ ಮುಚ್ಚುವ ಸಂಬಂಧ ನಾವು ಯೋಚಿಸುತ್ತಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಸಂಜೆ 5 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಅಂದರೆ 12 ಗಂಟೆಗಳ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ವಿಜಯ್ ವಾಡೆಟ್ಟಿವಾರ್ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ವಾರ ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ರೂಪಾಂತರಿ ಕೊರೊನಾ ವೈರಸ್ ಹೆಚ್ಚು ಸಾಂಕ್ರಾಮಿಕವಾಗಬಹುದು: ಏಮ್ಸ್ ಮುಖ್ಯಸ್ಥ

ಇನ್ನು ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀವಾಗಿ ಹೆಚ್ಚಳವಾಗುತ್ತಿದ್ದು, ಪ್ರತಿನಿತ್ಯ 2000 ಆಸುಪಾಸಿನಲ್ಲಿದ್ದ ಹೊಸ ಸೋಂಕಿತರ ಸಂಖ್ಯೆ ಈಗ 6 ಸಾವಿರ ಗಡಿ ದಾಟಿದೆ.

ಪ್ರಮುಖವಾಗಿ ವಿದರ್ಭ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಶುಕ್ರವಾರ ಕೂಡ ನಾಗ್ಪುರದಲ್ಲಿ 750 ಹೊಸ ಸೋಂಕಿತರ ಪ್ರಕರಣಗಳು ದೃಢಪಟ್ಟಿವೆ. ಅಲ್ಲದೆ ಅಮರಾವತಿ, ವಾರ್ಧಾ ಮತ್ತು ಯವತ್ಮಾಲ್ನಲ್ಲಿ ಸರ್ಕಾರ ಈಗಾಗಲೇ ಭಾಗಶಃ ಲಾಕ್ ಡೌನ್ ಘೋಷಿಸಿದೆ. ಹೊಸ ಪ್ರಕರಣಗಳು ಹೆಚ್ಚಾದರೆ, ಸರ್ಕಾರವು ರಾತ್ರಿ ಕರ್ಫ್ಯೂನಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಈ ನಿರ್ಧಾರವನ್ನು ಅಂತಿಮಗೊಳಿಸಲು ಮುಂದಿನ ವಾರ ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಭೆ ನಡೆಸಲಿದ್ದು, ಸಭೆಯಲ್ಲಿ ಆರೋಗ್ಯ ತಜ್ಞರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈಗಾಗಲೇ ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಮಾವಳಿಗಳನ್ನು ಜಾರಿ ಮಾಡಲಾಗಿದ್ದು, ಮದುವೆ, ಸಾವು ಸೇರಿದಂತೆ ಯಾವುದೇ ರೀತಿಯ ಸಭೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ ಎಂದು ನಿರ್ಬಂಧ ಹೇರಿದೆ.

English summary
Maharashtra relief and rehabilitation minister Vijay Wadettiwar on Saturday said that the state government may impose a 12-hour night curfew, “between 5 pm and 5 am”, in regions in case the spike in Covid-19 cases continues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X