ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ 5 ಲಕ್ಷ ಡೋಸ್ ಕೊರೊನಾ ಲಸಿಕೆ ವ್ಯರ್ಥ; ಜಾವ್ಡೇಕರ್

|
Google Oneindia Kannada News

ಮುಂಬೈ, ಏಪ್ರಿಲ್ 08: ಮಹಾರಾಷ್ಟ್ರದಲ್ಲಿ 5 ಲಕ್ಷ ಡೋಸ್ ಕೊರೊನಾವೈರಸ್ ಲಸಿಕೆ ವ್ಯರ್ಥವಾಗಿದೆ. ಸರಿಯಾದ ರೀತಿಯಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸಿಕೊಳ್ಳದಿರುವುದೇ ಮುಖ್ಯ ಕಾರಣ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ದೇಕರ್ ಆರೋಪಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕೆ ವಿತರಣೆ ಕುರಿತಾದ ಎಲ್ಲ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು. ಮಹಾರಾಷ್ಟ್ರ ಸರ್ಕಾರದ ಬಳಿ ಇನ್ನೂ 23 ಲಕ್ಷ ಡೋಸ್ ಲಸಿಕೆ ಬಾಕಿ ಉಳಿದಿದೆ ಎಂದು ತಿಳಿಸಿದರು.

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ: ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಡೋಸ್ ಪೂರೈಕೆಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ: ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಡೋಸ್ ಪೂರೈಕೆ

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಲಸಿಕೆಯ ಕೊರತೆ ಎದುರಾದ ಹಿನ್ನೆಲೆ ಹಲವು ಲಸಿಕೆ ವಿತರಣೆ ಕೇಂದ್ರಗಳನ್ನು ಮುಚ್ಚಲಾಗಿದೆ. ರಾಜ್ಯದಲ್ಲಿ ಕೇವಲ 14 ಲಕ್ಷ ಡೋಸ್ ಲಸಿಕೆ ಉಳಿದಿದ್ದು, ಮೂರು ದಿನಗಳಲ್ಲಿ ಈ ಲಸಿಕೆಯೂ ಖಾಲಿ ಆಗಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಹಾರಾಷ್ಟ್ರದಲ್ಲಿ ಲಸಿಕೆ ವಿತರಣೆ ಮತ್ತು ಸಂಗ್ರಹದ ಬಗ್ಗೆ ಮಾಹಿತಿ ಸಂಗ್ರಹಿಸಿದರು.

Maharashtra Govt Wasted Five Lakh Corona Vaccine Doses, Minister Prakash Javadekar Allegation

ಐದಾರು ದಿನಗಳಿಗೆ ಸಾಕಾಗುವಷ್ಟು ಲಸಿಕೆ ಸಂಗ್ರಹ:

ಮಹಾರಾಷ್ಟ್ರದಲ್ಲಿ 23 ಲಕ್ಷ ಡೋಸ್ ಕೊರೊನಾವೈರಸ್ ಲಸಿಕೆ ಇರುವುದರ ಬಗ್ಗೆ ಮೊದಲು ಸ್ಪಷ್ಟಪಡಿಸುತ್ತೇನೆ ಎಂದು ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು. ರಾಜ್ಯದಲ್ಲಿ ಇರುವ ಲಸಿಕೆಯು ಮುಂದಿನ ಐದಾರು ದಿನಗಳವರೆಗೂ ಸಾಕಾಗುತ್ತದೆ. ರಾಜ್ಯದ ಜಿಲ್ಲಾ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ವಿತರಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ರಾಜ್ಯದಲ್ಲಿ ಒಂದೇ ದಿನದಲ್ಲಿ 59,907 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 322 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 30,296 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 31,73,261 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 26,13,627 ಸೋಂಕಿತರು ಗುಣಮುಖರಾಗಿದ್ದು, 56,652 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ 5,01,559 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Maharashtra Govt Wasted Five Lakh Corona Vaccine Doses, Minister Prakash Javadekar Allegations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X