ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಿತಿ ಮೀರಿದ ಕೊರೊನಾ; ಮಹಾರಾಷ್ಟ್ರದಿಂದ ಹೊಸ ಮಾರ್ಗಸೂಚಿ

|
Google Oneindia Kannada News

ಮುಂಬೈ, ಮಾರ್ಚ್ 19: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ಕಠಿಣ ನಿಯಮಗಳನ್ನು ಹೇರಲಾಗುತ್ತಿದೆ. ಶುಕ್ರವಾರ ರಾಜ್ಯ ಸರ್ಕಾರ ಇನ್ನಷ್ಟು ನಿರ್ಬಂಧಗಳನ್ನು ಹೇರಿದೆ. ಆಡಿಟೋರಿಯಂ, ಸಿನಿಮಾ ಮಂದಿರಗಳು ಹಾಗೂ ಖಾಸಗಿ ಕಚೇರಿಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

ಕೊರೊನಾ ನಿಯಮಾವಳಿ ಪ್ರಕಾರ, ಆಡಿಟೋರಿಯಂ ಹಾಗೂ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಭರ್ತಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಕಚೇರಿಗಳಲ್ಲಿಯೂ ಶೇ. 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಮಾರ್ಚ್ 31ರವರೆಗೂ ಈ ನಿರ್ಬಂಧ ಮುಂದುವರೆಯುವುದಾಗಿ ತಿಳಿಸಿದೆ.

ಭಾರತದಲ್ಲಿ 103 ದಿನಗಳ ನಂತರ ಕೊರೊನಾವೈರಸ್ ಹೊಸ ದಾಖಲೆ!ಭಾರತದಲ್ಲಿ 103 ದಿನಗಳ ನಂತರ ಕೊರೊನಾವೈರಸ್ ಹೊಸ ದಾಖಲೆ!

ಸಿನಿಮಾ ಮಂದಿರಗಳು, ಕಚೇರಿ, ಆಡಿಟೋರಿಯಂಗೆ ಭೇಟಿ ನೀಡುವ ಜನರು ಕೊರೊನಾ ನಿಯಮಾವಳಿಗಳನ್ನು ಪಾಲಿಸುತ್ತಿದ್ದಾರೆ ಎಂಬುದನ್ನು ಆಯಾ ಸಂಸ್ಥೆಗಳು ಖಾತ್ರಿಪಡಿಸಬೇಕು ಎಂದು ಆದೇಶಿಸಿದೆ. ಈ ಆದೇಶ ಉಲ್ಲಂಘನೆಯಾದರೆ, ಕೇಂದ್ರ ಅನುಮತಿ ನೀಡುವವರೆಗೂ ಈ ಸಂಸ್ಥೆಗಳನ್ನು ತೆರೆಯುವಂತಿಲ್ಲ ಎಂದು ಹೇಳಿದೆ.

 Maharashtra Imposes Fresh Covid Restrictions Due To Surge In Cases

ಮಹಾರಾಷ್ಟ್ರದಲ್ಲಿ ಗುರುವಾರ ಒಂದೇ ದಿನ 25833 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 12,174 ಸೋಂಕಿತರು ಗುಣಮುಖರಾಗಿದ್ದು, ಸೋಂಕಿನಿಂದ 58 ಮಂದಿ ಸಾವನ್ನಪ್ಪಿದ್ದಾರೆ.

ಪಂಜಾಬ್‌ನಲ್ಲಿಯೂ ಕಠಿಣ ನಿಯಮ: ಪಂಜಾಬ್‌ನಲ್ಲಿಯೂ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಮಾರ್ಚ್ 31ರವರೆಗೂ ಮುಚ್ಚಲು ಆದೇಶಿಸಲಾಗಿದೆ. ಮೆಡಿಕಲ್ ಕಾಲೇಜುಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಹನ್ನೊಂದು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ.

ಪಂಜಾಬ್‌ನಲ್ಲಿ ಗುರುವಾರ 2,387 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

English summary
Due to increasing number of Coronavirus case in Maharashtra, the state government has imposed a fresh set of restrictions
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X