ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಮಹಾ ವಿಕಾಸ್ ಅಗಾಧಿಗೆ ವಿಜಯಮಾಲೆ

|
Google Oneindia Kannada News

ಮುಂಬೈ, ಜನವರಿ 19: ಮಹಾರಾಷ್ಟ್ರದ 106 ಅರೆ-ನಗರ ಸ್ಥಳೀಯ ಸಂಸ್ಥೆಗಳು, ನಗರ ಪಂಚಾಯತ್‌ಗಳು ಅಥವಾ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶಗಳ ಸರ್ಕಾರಿ ಸಂಸ್ಥೆಗಳ ಚುನಾವಣಾ ಫಲಿತಾಂಶ ಬುಧವಾರ ಹೊರ ಬಿದ್ದಿದೆ.

ರಾಜ್ಯದಲ್ಲಿ ನಡೆದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಚಿತ್ರಣವನ್ನು ನೋಡಿದರೆ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ 25 ಕ್ಷೇತ್ರಗಳಲ್ಲಿ, ಬಿಜೆಪಿ 24, ಕಾಂಗ್ರೆಸ್ 18 ಮತ್ತು ಶಿವಸೇನೆ 14ರಲ್ಲಿ ಅಧಿಕಾರದ ಗದ್ದುಗೆ ಹಿಡಿಯಲಿವೆ.

ಭಾರತದಲ್ಲಿ ಮಾರ್ಚ್ ವೇಳೆಗೆ 12 ವರ್ಷ ಮೇಲ್ಪಟ್ಟವರಿಗೂ ಕೊವಿಡ್-19 ಲಸಿಕೆಭಾರತದಲ್ಲಿ ಮಾರ್ಚ್ ವೇಳೆಗೆ 12 ವರ್ಷ ಮೇಲ್ಪಟ್ಟವರಿಗೂ ಕೊವಿಡ್-19 ಲಸಿಕೆ

ಎನ್‌ಸಿಪಿ (ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ), ಕಾಂಗ್ರೆಸ್ ಮತ್ತು ಶಿವಸೇನೆ ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಗಾಧಿಯ ಭಾಗವಾಗಿದೆ. ಈ ಮೈತ್ರಿಕೂಟವು ಕ್ಷೇತ್ರಗಳಲ್ಲಿ ಜಂಟಿಯಾಗಿ ಮತ್ತು ಕೆಲವು ಕಡೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಆ ಮೂಲಕ ಒಗ್ಗಟ್ಟಾಗಿ ಬಿಜೆಪಿಯನ್ನು ಸೋಲಿಸಲು ಅಣಿಯಾಗಿವೆ. ಈಗಾಗಲೇ ಅರ್ಧಕ್ಕಿಂತ ಹೆಚ್ಚು ಪಂಚಾಯತ್‌ಗಳನ್ನು ಗೆದ್ದುಕೊಂಡಿರುವುದು ಫಲಿತಾಂಶದಿಂದ ತಿಳಿದು ಬರುತ್ತಿದೆ.

Maharashtra Local Poll Result: Shiv sena and Allies Win, BJP Single Largest Party


ಅತಿದೊಡ್ಡ ಪಕ್ಷ ಎನಿಸಿರುವ ಬಿಜೆಪಿ:

ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಒಟ್ಟು 1,802 ಸ್ಥಾನಗಳಲ್ಲಿ 416 ಸ್ಥಾನಗಳನ್ನು ಗೆದ್ದುಕೊಂಡಿರುವ ಬಿಜೆಪಿ ಅತಿಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಪಕ್ಷವಾಗಿ ಹೊರಹೊಮ್ಮಿದೆ. "ಕಳೆದ 26 ತಿಂಗಳ ಕಾಲ ಅಧಿಕಾರದಿಂದ ಹೊರಗುಳಿದಿದ್ದರೂ, ಬಿಜೆಪಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸರ್ಕಾರದ ಬೆಂಬಲವಿಲ್ಲದೆ ನಾವು ಉತ್ತಮ ಫಲಿತಾಂಶಗಳನ್ನು ಪಡೆದುಕೊಂಡಿದ್ದೇವೆ," ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಮಹಾ ವಿಕಾಸ್ ಅಗಾಧಿಗೆ 976 ಸ್ಥಾನ:

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಗಾಡಿ ಸಮ್ಮಿಶ್ರ ಸರ್ಕಾರವು 57 ಅರೆನಗರ ಸ್ಥಳೀಯ ಸಂಸ್ಥೆಗಳನ್ನು ಗೆದ್ದಿದ್ದರೆ, ಭಾರತೀಯ ಜನತಾ ಪಕ್ಷವು 24 ಸ್ಥಾನಗಳನ್ನು ಗೆದ್ದುಕೊಂಡಿದೆ. ಮಹಾ ವಿಕಾಸ್ ಅಗಾಡಿ ಮೈತ್ರಿಕೂಟದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿವೆ ಎಂಬುದರ ಪಟ್ಟಿ ಇಲ್ಲಿದೆ ಓದಿ.

ಎನ್‌ಸಿಪಿ - 378 ಸ್ಥಾನ

ಶಿವಸೇನೆ - 301 ಸ್ಥಾನ

ಕಾಂಗ್ರೆಸ್ - 297 ಸ್ಥಾನ

ಒಬಿಸಿಗೆ ಶೇ.27ರಷ್ಟು ಮೀಸಲಾತಿಗೆ ತಡೆಯಾಜ್ಞೆ:

ಕಳೆದ ಡಿಸೆಂಬರ್ 15ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗೆ ಶೇಕಡಾ 27ರಷ್ಟು ಮೀಸಲಾತಿಗೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ವಾಪಸ್ ಪಡೆದುಕೊಳ್ಳುವಂತೆ ಮಹಾರಾಷ್ಟ್ರ ಸರ್ಕಾರ ಕಳೆದ ತಿಂಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಒಬಿಸಿಗೆ ನೀಡಲಾಗಿದ್ದ ಶೇ 27ರಷ್ಟು ಮೀಸಲಾತಿಯನ್ನು ಸಾಮಾನ್ಯ ವರ್ಗಕ್ಕೆ ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

Recommended Video

KL Rahul ಪ್ರಕಾರ ಪಂದ್ಯ ಸೋಲಲು ಇದೇ ಮುಖ್ಯ ಕಾರಣ | Oneindia Kannada

English summary
Maharashtra Local Poll Result: Shiv sena and Allies Win, BJP Single Largest Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X