ಕೇರಳದಿಂದ ಆಗಮಿಸುವವರಿಗೆ ಕೊರೊನಾವೈರಸ್ ಪರೀಕ್ಷೆ ಕಡ್ಡಾಯ!

ಮುಂಬೈ, ಫೆಬ್ರವರಿ.11: ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳದಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಕೇರಳದಲ್ಲಿ ಪ್ರತಿನಿತ್ಯ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆ ಕೇರಳದಿಂದ ಮಹಾರಾಷ್ಟ್ರಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೊರೊನಾವೈರಸ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ಬುಧವಾರದಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಅನೂಪ್ ಕುಮಾರ್ ತಿಳಿಸಿದ್ದಾರೆ.

ಭಾರತದಾದ್ಯಂತ ಒಟ್ಟು 1,42,562 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿದ್ದರೆ, ಈ ಪೈಕಿ ಕೇರಳದಲ್ಲೇ 64,000ಕ್ಕಿಂತ ಹೆಚ್ಚು ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರವು ಈ ನಿಯಮವನ್ನು ಜಾರಿಗೊಳಿಸಿದೆ.

Maharashtra Makes RT-PCR Covid Test Compulsory For Travellers From Kerala

ಕೇರಳದಲ್ಲಿ ಒಂದೇ ದಿನ 5980 ಮಂದಿಗೆ ಸೋಂಕು:

ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 5980 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು 64390 ಸಕ್ರಿಯ ಕೊವಿಡ್-19 ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಭಾರತದಲ್ಲಿ 12923 ಮಂದಿಗೆ ಕೊರೊನಾವೈರಸ್:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12923 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಂದೇ ದಿನ 108 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,55,360ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 11,764 ಜನರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,71,294ಕ್ಕೆ ಏರಿಕೆಯಾಗಿದೆ. 1,05,73,372 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,42,562 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+