• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್‌ಗೆ ಕೊರೊನಾ ಸೋಂಕು

|

ಮುಂಬೈ,ಫೆಬ್ರವರಿ 22:ಮಾಹಾರಾಷ್ಟ್ರ ಆಹಾರ ಮತ್ತು ನಾಗರಿಕ ಸಚಿವ ಛಗನ್ ಭುಜಬಲ್‌ಗೆ ಕೊರೊನಾ ಸೋಂಕು ತಗುಲಿದೆ.

ನಮ್ಮ ಎಲ್ಲಾ ನಾಗರಿಕರೂ ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದು ಮರಾಠಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂಗೆ ನಿರ್ಧಾರ

ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿ ಮನವಿ ಮಾಡುತ್ತಿದ್ದೇನೆ, ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಜನರ ನಿರ್ಲಕ್ಷ್ಯದಿಂದಲೇ ಕೊರೊನಾ ಸೋಂಕು ಹೆಚ್ಚಳವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ 6281 ಪ್ರಕರಣಗಳು ದಾಖಲಾಗಿದ್ದವು.ಇದರೊಂದಿಗೆ ಸತತ ಐದನೇ ದಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 20,93,913ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದ ಗ್ರಾಮೀಣ ಪ್ರದೇಶ ಮತ್ತು ಮುಂಬೈ ಕೊಳಚೆ ಪ್ರದೇಶವಲ್ಲದ ಸ್ಥಳಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಹೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕರ್ಫ್ಯೂ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕರ್ಫ್ಯೂ ಸಮಯದಲ್ಲಿ, ಮದುವೆ ಸಭಾಂಗಣಗಳು, ಮಾರುಕಟ್ಟೆಗಳು, ಸಿನೆಮಾ ಹಾಲ್‌ಗಳು ಮತ್ತು ಜನಸಂದಣಿಯು ಸೇರುವ ಇತರ ಸ್ಥಳಗಳೆಲ್ಲವೂ ಮುಚ್ಚಲ್ಪಡುತ್ತವೆ. ತರಕಾರಿ ಮಾರುಕಟ್ಟೆಗಳನ್ನುಸಹ ಮುಚ್ಚುವ ಸಂಬಂಧ ನಾವು ಯೋಚಿಸುತ್ತಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಸಂಜೆ 5 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಅಂದರೆ 12 ಗಂಟೆಗಳ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ವಿಜಯ್ ವಾಡೆಟ್ಟಿವಾರ್ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ವಾರ ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀವಾಗಿ ಹೆಚ್ಚಳವಾಗುತ್ತಿದ್ದು, ಪ್ರತಿನಿತ್ಯ 2000 ಆಸುಪಾಸಿನಲ್ಲಿದ್ದ ಹೊಸ ಸೋಂಕಿತರ ಸಂಖ್ಯೆ ಈಗ 6 ಸಾವಿರ ಗಡಿ ದಾಟಿದೆ.

English summary
Maharashtra Food and Civil Supplies Minister Chhagan Bhujbal on Monday said he has tested positive for coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X