ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅರೆಸ್ಟ್
ಮುಂಬೈ ಫೆಬ್ರವರಿ 23: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಇಂದು ವಿಚಾರಣೆ ನಂತರ ಬಂಧಿಸಲಾಗಿದೆ. ಮನಿಲಾಂಡ್ರಿಂಗ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಂಬಂಧಿಕರು ಹಾಗೂ ಆಪ್ತರ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ. ದಾವೂದ್ ಸೋದರಿ ಹಸೀನಾ ಪಾರ್ಕರ್ ಮನೆ ಮೇಲೆ ಜಾರಿ ನಿರ್ದೇಶನಾಲಯ ತಂಡ ದಾಳಿ ನಡೆಸಿದ್ದರು. ಇಂದು ದಾವೂದ್ ಸೋದರ ಇಕ್ಬಾಲ್ ಕಸ್ಕರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಾದ ಬಳಿಕ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಚಿವ ನವಾಬ್ ಮಲೀಕ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೊಳಪಡಿಸಿ, ನಂತರ ಬಂಧಿಸಿದ್ದಾರೆ.
ದಾವೂದ್ ಇಬ್ರಾಹಿಂ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿಸಲ್ಪಟ್ಟ ನಂತರ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರು "ಬಂಧಿತರಾಗಿದ್ದೇವೆ, ಆದರೆ ಹೆದರುವುದಿಲ್ಲ. ನಾವು ಹೋರಾಡುತ್ತೇವೆ ಮತ್ತು ಗೆಲ್ಲುತ್ತೇವೆ" ಎಂದು ಪ್ರತಿಕ್ರಿಯಿಸಿದ್ದಾರೆ.
ಲಭ್ಯ ಮಾಹಿತಿ ಪ್ರಕಾರ ಮಂಗಳವಾರ ಮುಂಜಾನೆಯೇ ವಿಚಾರಣೆಗೆ ಹಾಜರಾಗಿರುವ ಮಲೀಕ್ ಬಳಿ ಕೆಲವು ಬ್ಯಾಂಕ್ ವ್ಯವಹಾರ, ಹಣ ವರ್ಗಾವಣೆ, ಆಸ್ತಿ ಡೀಲ್ ಬಗ್ಗೆ ಮಾಹಿತಿ ಕೇಳಲಾಗಿತ್ತು. ಈ ಹಿಂದೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಯು ರಾಜಕೀಯ ಪ್ರೇರಿತವಾಗಿದೆ ಎಂದು ನವಾಬ್ ಮಲೀಕ್ ಟೀಕಿಸಿದ್ದರು.
#WATCH | NCP workers gather outside the Enforcement Directorate office in Mumbai and raise slogans after the arrest of party leader and Maharashtra minister Nawab Malik. He has been arrested in connection with Dawood Ibrahim money laundering case. pic.twitter.com/cY6FDytpZq
— ANI (@ANI) February 23, 2022
ಎನ್‌ಸಿಪಿ ಮುಖಂಡ ಸಚಿವ ನವಾಬ್ ಅವರು 1993 ರ ಬಾಂಬೆ ಬಾಂಬ್ ಸ್ಫೋಟದ ಅಪರಾಧಿ ಸರ್ದಾರ್ ಶಾವಾಲಿ ಖಾನ್ ಮತ್ತು ದಿವಂಗತ ಹಸೀನಾ ಪಾರ್ಕರ್, ದಾವೂದ್ ಗ್ಯಾಂಗಿನ ಮೊಹಮ್ಮದ್ ಸಲೀಂ ಇಶಾಕ್ ಪಟೇಲ್ ಅವರೊಂದಿಗೆ ಆಸ್ತಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ದೇವೇಂದ್ರ ಫಡ್ನವಿಸ್ಆರೋಪಿಸಿದ್ದರು. ಕಳೆದ ನವೆಂಬರ್‌ನಲ್ಲಿ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ, ಬಿಜೆಪಿ ನಾಯಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದರು.
#WATCH | Mumbai: NCP leader and Maharashtra Minister Nawab Malik being brought out of Enforcement Directorate office, to be taken for medical examination.
— ANI (@ANI) February 23, 2022
He has been arrested by Enforcement Directorate in connection with Dawood Ibrahim money laundering case. pic.twitter.com/UMAVK5ZEVW
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಥಾಣೆ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಇಕ್ಬಾಲ್ ಕಸ್ಕರ್ ನನ್ನು ತಮ್ಮ ವಶಕ್ಕೆ ಇಡಿ ಅಧಿಕಾರಿಗಳು ತೆಗೆದುಕೊಂಡಿದ್ದಾರೆ. ಇಕ್ಬಾಲ್ ಕಸ್ಕರ್‌ನನ್ನು ಪಿಎಂಎಲ್ಎ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನಂತರ ವಿಚಾರಣೆಗೆ ಕರೆದೊಯ್ಯಲಾಗಿದೆ. ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ವಿಚಾರಣೆ ಜಾರಿಯಲ್ಲಿರುವಾಗಲೇ ನವಾಜ್ ಮಲೀಕ್ ವಿಚಾರಣೆಯನ್ನು ಇಡಿ ಅಧಿಕಾರಿಗಳು ಮುಂದುವರೆಸಿದ್ದಾರೆ.

1993ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಮತ್ತು ಪರಾರಿಯಾಗಿರುವ ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ದಾಖಲಿಸಿದ ಎಫ್‌ಐಆರ್ ಮತ್ತು ಕೆಲವು ಸ್ವತಂತ್ರ ಗುಪ್ತಚರ ಮಾಹಿತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮುಂಬೈನ ಹಲವಾರು ಆಸ್ತಿಗಳಲ್ಲಿ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications