ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹಾಗೂ ಪತಿಗೆ ಕೊವಿಡ್-19

|
Google Oneindia Kannada News

ಮುಂಬೈ, ಡಿಸೆಂಬರ್ 29: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗಿದೆ. ಬುಧವಾರ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆಯವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸುಪ್ರಿಯಾ ಸುಳೆ ಹಾಗೂ ಅವರ ಪತಿ ಸದಾನಂದ್ ಅವರಿಗೂ ಸೋಂಕು ತಗುಲಿದೆ.

"ಸದಾನಂದ್ ಮತ್ತು ನಾನು, ಇಬ್ಬರಿಗೂ COVID-19 ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ. ನಮಗೆ ಯಾವುದೇ ರೋಗದ ಲಕ್ಷಣಗಳು ಇರಲಿಲ್ಲ. ನಮ್ಮೊಂದಿಗೆ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಕೊರೊನಾವೈರಸ್ ಸೋಂಕು ಪರೀಕ್ಷಿಸಿಕೊಳ್ಳಬೇಕು," ಎಂದು ಸುಪ್ರಿಯಾ ಸುಳೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 1,172 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 66,11,078ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 20 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,40,216ಕ್ಕೆ ಏರಿಕೆಯಾಗಿದೆ.

Maharashtra: NCP MP Supriya Sule and her husband tested positive for Covid-19
ಮಹಾರಾಷ್ಟ್ರದಲ್ಲಿ 64 ಲಕ್ಷ ಸೋಂಕಿತರು ಗುಣಮುಖ:

ರಾಜ್ಯದಲ್ಲಿ ಮಂಗಳವಾರವೊಂದೇ ದಿನದಲ್ಲಿ 1,399 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 64,50,585 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಓಮಿಕ್ರಾನ್ ಪ್ರಕರಣಗಳಲ್ಲಿ ಮಹಾರಾಷ್ಟ್ರಕ್ಕೆ ಎರಡನೇ ಸ್ಥಾನ:

ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಹೆಚ್ಚಾಗಿ ವರದಿ ಆಗುತ್ತಿವೆ. ಕೊವಿಡ್-19 ಸೋಂಕಿತರ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಿದ ವೇಳೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೂ ಒಟ್ಟು 167 ಮಂದಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಈ ಪೈಕಿ 72 ಸೋಂಕಿತರು ಗುಣಮುಖರಾಗಿದ್ದಾರೆ.

English summary
Maharashtra: NCP MP Supriya Sule and her husband tested positive for Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X