India
  • search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ದೇಶದ ಗಮನ ಸೆಳೆದ ಮಹಾ ಸಿಎಂ ಠಾಕ್ರೆ ಸುದ್ದಿಗೋಷ್ಠಿ

|
Google Oneindia Kannada News

ಮುಂಬೈ, ಜೂನ್ 22: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ಭವಿಷ್ಯದ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಇದರ ಮಧ್ಯೆ ಬುಧವಾರ ಸಂಜೆ ಸಿಎಂ ಉದ್ಧವ್ ಠಾಕ್ರೆ ನಡೆಸಿದ ಸುದ್ದಿಗೋಷ್ಠಿ ಇಡೀ ದೇಶದ ಗಮನವನ್ನು ಸೆಳೆದಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿರುವ ಹಿನ್ನೆಲೆ ಫೇಸ್ ಬುಕ್ ಲೈವ್ ಮೂಲಕ ರಾಜ್ಯದ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಹಾರಾಷ್ಟ್ರದಿಂದ ಸೂರತ್ ಹಾಗೂ ಸೂರತ್ ನಿಂದ ಗುವಾಹಟಿಗೆ ಜಿಗಿಯುತ್ತಿರುವ ಶಿವಸೇನೆ ಬಂಡಾಯ ಶಾಸಕ ಏಕನಾಥ್ ಶಿಂಧೆ ತಮ್ಮ ಬೆಂಬಲಕ್ಕೆ 46 ಮಂದಿ ಶಾಸಕರಿದ್ದಾರೆ ಎಂದು ವಾದ ಮಂಡಿಸುತ್ತಿದ್ದಂತೆ ರಾಜಕೀಯ ಲೆಕ್ಕಾಚಾರಗಳೆಲ್ಲ ತಿರುವು ಮುರುವು ಆಗಿವೆ.

ಸರ್ಕಾರದ ಅವನತಿ ಮತ್ತು ಉನ್ನತಿ ಅಂಕಿ-ಅಂಶ:

ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಒಟ್ಟು 288 ಸ್ಥಾನಗಳಿದ್ದು, ಒಬ್ಬ ಶಾಸಕರು ವಿಧಿವಶವಾದ ಹಿನ್ನೆಲೆ ಈ ಸಂಖ್ಯೆಯು 287ಕ್ಕೆ ತಗ್ಗಿದೆ. ಹೀಗಾಗಿ ಸರ್ಕಾರದ ಬಹುಮತಕ್ಕೆ ಕನಿಷ್ಠ 144 ಸ್ಥಾನಗಳು ಬೇಕಾಗುತ್ತದೆ. ಬಿಜೆಪಿಯು 106 ಶಾಸಕರನ್ನು ಹೊಂದುವ ಮೂಲಕ ಅತಿದೊಡ್ಡ ಪಕ್ಷವಾಗಿದೆ. ಆದರೆ 55 ಶಾಸಕರನ್ನು ಹೊಂದಿರುವ ಶಿವಸೇನೆ, 53 ಶಾಸಕರನ್ನು ಹೊಂದಿರುವ ಎನ್ ಸಿಪಿ ಮತ್ತು 44 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಜೊತೆ ಮೂವರು ಶಾಸಕರನ್ನು ಹೊಂದಿರುವ ಬಹುಜನ ವಿಕಾಸ ಅಘಾಡಿ ಪಕ್ಷಗಳು ಒಟ್ಟಾಗಿ ಸೇರಿಕೊಂಡು ಮಹಾ ವಿಕಾಸ ಅಘಾಡಿ ಎಂದ ಸಮ್ಮಿಶ್ರ ಸರ್ಕಾರವನ್ನು ರಚಿಸಿವೆ.

ಮಹಾ ವಿಕಾಸ ಅಘಾಡಿ ಒಕ್ಕೂಟವು 169 ಶಾಸಕರ ಬೆಂಬಲವನ್ನು ಹೊಂದಿದೆ. ಇನ್ನೊಂದು ಮಗ್ಗಲಿನಲ್ಲಿ ಬಿಜೆಪಿಯು 106 ಸ್ಥಾನಗಳ ಜೊತೆಗೆ ಮಿತ್ರಪಕ್ಷಗಳು ಹಾಗೂ ಐದು ಇತರೆ ಶಾಸಕರು ಸೇರಿದಂತೆ ಒಟ್ಟು 113 ಶಾಸಕರ ಬೆಂಬಲವನ್ನು ಹೊಂದಿದೆ.

English summary
Maharashtra Political Crisis : Maharashtra CM Uddhav Thackeray address the public at 6 pm. Shiv Sena has asked all its MLAs in Maharashtra, including the rebels to attend a legislature party meeting at 5 PM or face action under the anti-defection law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X