ಮಹಾರಾಷ್ಟ್ರದಲ್ಲಿ ಒಂದೇ ದಿನ 15,602 ಕೊರೊನಾ ಸೋಂಕಿತರು ಪತ್ತೆ

ಮುಂಬೈ, ಮಾರ್ಚ್ 13: ಮಹಾರಾಷ್ಟ್ರದಲ್ಲಿ ಒಂದೇ ದಿನ 15,602 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 88 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 22,97,793 ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 52,811ಕ್ಕೆ ಏರಿಕೆಯಾಗಿದೆ.ಇಂದು 7467 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇದುವರೆಗೆ 21,25,211 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 1,18,525 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ.92.49ರಷ್ಟಿದೆ. ಮೃತರ ಪ್ರಮಾಣ ಶೇ.2.3ರಷ್ಟಿದೆ.

ಭಾರತದಲ್ಲಿ ದಿನಕಳೆದಂತೆ ಕೊರೊನಾ ಅಬ್ಬರ ಹೆಚ್ಚಾಗುತ್ತಿದ್ದು, ದೇಶದಲ್ಲಿಂದು ಬರೋಬ್ಬರಿ 24,882 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

Corona Maharashtra

24,882 ಹೊಸ ಪ್ರಕರಣಗಳೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,13,33,728ಕ್ಕೆ ಏರಿಕೆಯಾಗಿದೆ. ಒಂದೇ ದಿನ 140 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,58,446ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,13,33,728 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 19,957 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,09,73,260ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 2,02,022 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಇನ್ನು ಭಾರತದಲ್ಲಿ ಒಂದೇ ದಿನ 8,40,635 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 22,58,39,273 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+