ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸ: ಡೇಂಜರ್ ಜೋನ್‌ನಲ್ಲಿ ಮುಂಬೈ, ಪುಣೆ

ಮುಂಬೈ, ಜೂನ್ 11: ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 3254 ಜನರಿಗೆ ಕೊರೊನಾ ವೈರಸ್ ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,041ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

24 ಗಂಟೆಯಲ್ಲಿ 149 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 3,438ಕ್ಕೆ ಜಿಗಿದಿದೆ. ಇನ್ನು 1879 ಮಂದಿ ಬುಧವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 44,517 ಜನರು ಮಹಾಮಾರಿಯಿಂದ ಚೇತರಿಸಿಕೊಂಡಿದ್ದಾರೆ. ಇನ್ನು 46,074 ಪ್ರಕರಣಗಳು ಸಕ್ರಿಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ ಪಾಲಿಗೆ ಕೊರೊನಾ ಹಾಟ್‌ಸ್ಪಾಟ್‌ ನಗರವಾಗಿರುವ ಮುಂಬೈನಲ್ಲಿ ನಿನ್ನೆ ಒಂದೇ ದಿನ 1,567 ಹೊಸ ಪ್ರಕರಣ ದಾಖಲಾಗಿದ್ದು, 97 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮುಂಬೈ ಮಹಾನಗರದಲ್ಲಿ ಒಟ್ಟು ಸೋಂಕಿನ ಸಂಖ್ಯೆ 52,445 ಹಾಗೂ ಒಟ್ಟು ಸಾವಿನ ಸಂಖ್ಯೆ 1,855ಕ್ಕೆ ಏರಿದೆ.

maharashtra-reported-3254-new-coronavirus-cases-on-wednesday

ಮುಂಬೈ ಬಿಟ್ಟರೆ ಅತಿ ಹೆಚ್ಚು ಸೋಂಕು ವರದಿಯಾಗಿರುವುದು ಥಾಣೆ ಜಿಲ್ಲೆಯಲ್ಲಿ. ಬುಧವಾರ 588 ಕೇಸ್‌ ಹೊಸದಾಗಿ ಪತ್ತೆಯಾಗಿದೆ. ಈ ಮೂಲಕ ಥಾಣೆಯಲ್ಲಿ ಒಟ್ಟು ಸೋಂಕಿನ ಸಂಖ್ಯೆ 12,941 ಏರಿಕೆಯಾಗಿದ್ದು, ಇದುವರೆಗೂ 433 ಸಾವನ್ನಪ್ಪಿದ್ದಾರೆ.

ಪುಣೆಯಲ್ಲಿ ಹೊಸದಾಗಿ 435 ಜನರಿಗೆ ಸೋಂಕು ಕಾಣಿಸಿಕೊಂಡಿತ್ತು. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿನ ಸಂಖ್ಯೆ 10394ಕ್ಕೆ ಜಿಗಿದಿದೆ. ಈವರೆಗೂ 449 ಜನರು ಪ್ರಾಣ ಕಳೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+