ಮಹಾರಾಷ್ಟ್ರದಲ್ಲಿ ಮತ್ತೆ ದಾಖಲೆ ಬರೆದ ಕೊರೊನಾ, ಬರೋಬ್ಬರಿ 14,888 ಪ್ರಕರಣಗಳು ಪತ್ತೆ
ಮುಂಬೈ, ಆಗಸ್ಟ್ 26: ಭಾರತದ ಕೊರೊನಾ ಹಾಟ್‌ಸ್ಪಾಟ್ ಎನಿಸಿಕೊಂಡಿರುವ ಮಹಾರಾಷ್ಟ್ರದಲ್ಲಿ ಇಂದು ಮತ್ತೆ 14,888 ಪ್ರಕರಣಗಳು ಪತ್ತೆಯಾಗಿವೆ.
Recommended Video
ಮಹಾರಾಷ್ಟ್ರದಲ್ಲಿ ಪ್ರಸ್ತುತ 1,72,873 ಸಕ್ರಿಯ ಸೋಂಕು ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕತ್ಸೆ ಪಡೆಯಲಾಗುತ್ತಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 14, 888 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7,18,711ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 295 ಮಂದಿ ಸೋಂಕಿತರು ಸಾವುನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 23,089ಕ್ಕೆ ಏರಿಕೆಯಾಗಿದೆ. ಅಂತೆಯೇ ಮಹಾರಾಷ್ಟ್ರದಲ್ಲಿ 24 ಗಂಟೆಗಳ ಅವಧಿಯಲ್ಲಿ 7,637 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 5,22,427ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 31 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 60975 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 848 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 58390ಕ್ಕೆ ಏರಿಕೆಯಾಗಿದೆ.
ಕರ್ನಾಟಕ ಕೊರೊನಾ ಅಪ್‌ಡೇಟ್ಸ್: 5851 ಕೊರೊನಾ ಸೋಂಕಿತರು ಪತ್ತೆ ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3167324ಕ್ಕೆ ಏರಿಕೆಯಾಗಿದೆ. ಈ ಪೈಕಿ 24,04,585 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,04,348 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications