Today's Update: ಮಹಾರಾಷ್ಟ್ರದಲ್ಲಿ 2560 ಕೇಸ್, ತಮಿಳುನಾಡಿನಲ್ಲಿ 1286 ಸೋಂಕು
ಮುಂಬೈ, ಜೂನ್ 3: ದೇಶದ ಕೊರೊನಾ ವೈರಸ್ ಹಾಟ್‌ಸ್ಪಾಟ್ ಮಹಾರಾಷ್ಟ್ರದಲ್ಲಿ ಇಂದು 2,560 ಕೇಸ್ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74,860ಕ್ಕೆ ಏರಿಕೆಯಾಗಿದೆ.
ಮಹಾರಾಜ್ಯದಲ್ಲಿಂದು 122 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 2,587ಕ್ಕೆ ಜಿಗಿದಿದೆ. ಪ್ರಸ್ತುತ ರಾಜ್ಯದಲ್ಲಿ 32329 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಮುಂಬೈ ಧಾರವಿಯಲ್ಲಿ 19 ಜನರಿಗೆ ಇಂದು ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಸ್ಲಂ ಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1849ಕ್ಕೆ ಏರಿದೆ. ಇದುವರೆಗೂ 71 ಜನರು ಮೃತಪಟ್ಟಿದ್ದಾರೆ.
ತಮಿಳುನಾಡಿನಲ್ಲಿಂದು 1,286 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 25,872ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಒಂದೇ ದಿನ 82 ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 632ಕ್ಕೆ ಏರಿಕೆಯಾಗಿದೆ. ಪಂಜಾಬ್‌ನಲ್ಲಿ ಹೊಸದಾಗಿ 34 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2376ಕ್ಕೆ ಏರಿಕೆಯಾಗಿದೆ.
ಜಮ್ಮು ಕಾಶ್ಮೀರದಲ್ಲಿ ಇಂದು 139 ಜನರಿಗೆ ಕೊರೊನಾ ವೈರಸ್ ಅಂಟಿಕೊಂಡಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1007ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಒಂದೇ ದಿನ ಇಂದು 267 ಮಂದಿಗೆ ಕೊರೊನಾ ಸೋಂಕು ತಗುಲಿದೆ.












Click it and Unblock the Notifications