ಮಹಾರಾಷ್ಟ್ರದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ
ಮುಂಬೈ,ಫೆಬ್ರವರಿ 15: ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ 4095 ಕೊರೊನಾ ಸೋಂಕಿತರು ಪತ್ತೆಯಾಗಿದ್ದು,40 ಮಂದಿ ಮೃತಪಟ್ಟಿದ್ದಾರೆ.
ಒಟ್ಟು 20,64,278 ಕೊರೊನಾ ಸೋಂಕಿತರಿದ್ದಾರೆ. 51,529 ಮಂದಿ ಇದುವರೆಗೆ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 1355 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
35,965 ಸಕ್ರಿಯ ಪ್ರಕರಣಗಳಿವೆ. 1,74,243 ಮಂದಿ ಗೃಹ ಬಂಧನದಲ್ಲಿದ್ದಾರೆ. 1747 ಮಂದಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ.
ಕೋವಿಡ್: ದೇಶದಲ್ಲಿ ಸತತ ಎರಡನೆಯ ದಿನ 100ಕ್ಕಿಂತ ಕಡಿಮೆ ಸಾವು
ಮಹಾರಾಷ್ಟ್ರದಲ್ಲಿ ಕೊರೊನಾ ರಿಕವರಿ ಶೇ.95.7ರಷ್ಟಿದೆ. ಸಾವಿನ ಸಂಖ್ಯೆ ಶೇ.2.5ರಷ್ಟಿದೆ. ಭಾನುವಾರ 48,782 ಪರೀಕ್ಷೆಗಳನ್ನು ನಡೆಸಲಾಗಿದೆ. ಮುಂಬೈ ನಗರದಲ್ಲಿ ಭಾನುವಾರ 645 ಪ್ರಕರಣಗಳು ಪತ್ತೆಯಾಗಿದ್ದವು.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,649 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ಒಟ್ಟು 90 ಮಂದಿ ಸೋಂಕಿತರು ಮೃತಪಟ್ಟಿದ್ದರೆ, 9,489 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದರಿಂದ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 1,09,16,589ಕ್ಕೆ ಏರಿಕೆಯಾಗಿದೆ. ಒಟ್ಟು ಸಾವುಗಳ ಸಂಖ್ಯೆ 1,55,732ಕ್ಕೆ ತಲುಪಿದೆ. ಇದುವರೆಗೂ ಒಟ್ಟು 1,06,21,220 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,39,637ಗೆ ತಲುಪಿದೆ.