Breaking; ಸ್ಪೀಕರ್ ಚುನಾವಣೆ, ಶಿವಸೇನೆ ಶಾಸಕರಿಂದ ವಿಪ್ ಉಲ್ಲಂಘನೆ!
ಮುಂಬೈ, ಜುಲೈ 03; ಏಕನಾಥ್ ಶಿಂಧೆ ವಿಶ್ವಾಸ ಮತದಲ್ಲಿ ಗೆಲವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಭಾನುವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆಯ ವೇಳೆ ಹಲವು ಶಿವಸೇನೆ ಶಾಸಕರು ವಿಪ್ ಉಲ್ಲಂಘನೆ ಮಾಡಿದ್ದಾರೆ.
ಭಾನುವಾರ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ ನಡೆಯಿತು. ಸ್ಪೀಕರ್ ಬಿಜೆಪಿಯ ಶಾಸಕ ರಾಹುಲ್ ನಾರ್ವೇಕರ್ ಆಯ್ಕೆಯಾದರು. ರಾಹುಲ್ 164 ಮತ ಪಡೆದರೆ, ಶಿವಸೇನೆಯ ಅಭ್ಯರ್ಥಿ ರಾಜನ್ ಸಾಲ್ವಿ 107 ಮತಗಳಿಸಿದರು.
ಸ್ಪೀಕರ್ ಚುನಾವಣೆ ಬಳಿಕ ಮಾತನಾಡಿದ ಶಿವಸೇನೆಯ ಚೀಫ್ ವಿಪ್ ಸುನೀಲ್ ಪ್ರಭು, "ಪಕ್ಷದ ಕೆಲವು ಶಾಸಕರು ಸ್ಪೀಕರ್ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ" ಎಂದರು.

"ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಮನವಿ ಮಾಡಲಾಗಿದೆ. 12 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ" ಎಂದು ಹೇಳಿದರು.
ಸೋಮವಾರ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದದ ಸರ್ಕಾರ ಬಹುಮತ ಸಾಬೀತು ಮಾಡಬೇಕಿದೆ. ಬಿಜೆಪಿ, ಶಿವಸೇನೆ ಮೈತ್ರಿ ಸರ್ಕಾರಕ್ಕೆ ಎಷ್ಟು ಶಾಸಕರ ಬೆಂಬಲವಿದೆ? ಎಂದು ತಿಳಿಯಲಿದೆ.
ಸ್ಪೀಕರ್ ಆಯ್ಕೆಯಲ್ಲಿ 164 ಸದಸ್ಯರ ಬಲ ಸಿಕ್ಕಿದೆ. ಅಲ್ಲದೇ ಹಲವು ಶಿವಸೇನೆ ಶಾಸಕರು ವಿಪ್ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್ ಬಹುಮತಗಳಿಸುವ ನಿರೀಕ್ಷೆ ಇದೆ.
ಸಭೆ ಕರೆದ ಶರದ್ ಪವಾರ್; ಇನ್ನು ರಾಜ್ಯದ ಪ್ರತಿಪಕ್ಷ ಸ್ಥಾನವನ್ನು ಎನ್‌ಸಿಪಿ ಪಡೆದಿದೆ. ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಿರೋಧ ಪಕ್ಷದ ನಾಯಕನ ಆಯ್ಕೆ, ವಿಶ್ವಾಸ ಮತದ ಸಂದರ್ಭದಲ್ಲಿ ಮತದಾನ ಮಾಡುವ ಕುರಿತು ಚರ್ಚಿಸಲು ಶಾಸಕರ ಸಭೆಯಲ್ಲಿ ಭಾನುವಾರ ಸಂಜೆ ಕರೆದಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications