ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರದಲ್ಲಿ 10,12ನೇ ತರಗತಿ ಪರೀಕ್ಷೆ ಮುಂದೂಡಿಕೆ

|
Google Oneindia Kannada News

ಮುಂಬೈ, ಏಪ್ರಿಲ್ 12: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 10 ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಚಿವರಾದ ವರ್ಷಾ ಗಾಯಕ್‌ವಾಡ್ ತಿಳಿಸಿದ್ದಾರೆ.

12ನೇ ತರಗತಿಗಳಿಗೆ ಮೇ ಕೊನೆಯ ವಾರದಲ್ಲಿ ಪರೀಕ್ಷೆ ನಡೆಯಬೇಕಿತ್ತು ಹಾಗೂ 10ನೇ ತರಗತಿಗೆ ಜೂನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು.ಮುಂದಿನ ದಿನಗಳಲ್ಲಿ ಹೊಸದಾಗಿ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೊರೊನಾ ಹೆಚ್ಚಳ: ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್‌ಡೌನ್, ಸಿಎಂ ಏನಂತಾರೆ?ಕೊರೊನಾ ಹೆಚ್ಚಳ: ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್‌ಡೌನ್, ಸಿಎಂ ಏನಂತಾರೆ?

ಅಷ್ಟೇ ಅಲ್ಲದೆ ಸಿಬಿಎಸ್‌ಇ, ಐಸಿಎಸ್‌ಇ, ಐಬಿ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಿಗೂ ಕೂಡ ಪರೀಕ್ಷೆ ಮುಂದೂಡುವಂತೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದರು. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಎರಡನೇ ಅಲೆ ಮೇಲಿಂದ ಮೇಲೆ ಹೊಡೆತ ಕೊಡುತ್ತಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗಿದೆ.

Maharashtra State Board Exams For Classes 10, 12 Postponed Amid COVID Surge

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 63,294 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 34,008 ಸೋಂಕಿತರು ಗುಣಮುಖರಾಗಿದ್ದು, ಕೊರೊನಾಗೆ 349 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ. ಈವರೆಗೂ 27,82,161 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,987 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,65,587 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದ ಪುಣೆಯಲ್ಲಿ ಕೊವಿಡ್-19 ಸೋಂಕಿನ ಸ್ಫೋಟವಾಗಿದೆ. ಕಳೆದ 24 ಗಂಟೆಗಳಲ್ಲಿ 12,377 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

English summary
The upcoming Maharashtra Board SSC, HSC Exams 2021 for classes 10 and 12 have been postponed amid a massive surge in COVID-19 cases in the state, Maharashtra Education Minister Varsha Gaikwad announced on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X