ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ನವೆಂಬರ್ 5ರಿಂದ ಚಿತ್ರಮಂದಿರಗಳು ಓಪನ್

|
Google Oneindia Kannada News

ಮುಂಬೈ, ನವೆಂಬರ್ 04: ಮಹಾರಾಷ್ಟ್ರದಲ್ಲಿ ನವೆಂಬರ್ 5ರಿಂದ ಚಿತ್ರಮಂದಿರಗಳು ತೆರೆಯಲಿವೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ಎಲ್ಲಾ ಮಾಲ್‌, ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿತ್ತು. ಚಿತ್ರಮಂದಿರಗಳನ್ನು ತೆರೆಯಬಹುದು ಆದರೆ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ಎಂದು ಹೇಳಲಾಗಿದೆ. ಆದರೆ ಯಾವುದೇ ಆಹಾರ ಪದಾರ್ಥಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ ಎಂದು ತಿಳಿಸಲಾಗಿದೆ.

ಭಾರತದಲ್ಲಿ ಒಂದೇ ದಿನ 46254 ಮಂದಿಗೆ ಕೊವಿಡ್-19 ಸೋಂಕು ಭಾರತದಲ್ಲಿ ಒಂದೇ ದಿನ 46254 ಮಂದಿಗೆ ಕೊವಿಡ್-19 ಸೋಂಕು

ಅದನ್ನು ಹೊರತುಪಡಿಸಿ ಕಂಟೈನ್ಮೆಂಟ್ ಜೋನ್ ಪ್ರದೇಶಗಳಿಂದ ದೂರವಿರುವ ಒಳಾಂಗಣ, ಸ್ವಿಮ್ಮಿಂಗ್ ಪೂಲ್, ಯೋಗ ಕೇಂದ್ರಗಳನ್ನು ಗುರುವಾರದಿಂದ ತೆರೆಯಬಹುದಾಗಿದೆ.

Maharashtra To Reopen Cinema Halls From November 5

ಹಾಗೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಸರ್ ಬಳಕೆ ಮಾಡಬೇಕು. ಕೇಂದ್ರ ಸರ್ಕಾರವು ಅಕ್ಟೋಬರ್ 14ರಿಂದಲೇ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು.

ಮಹಾರಾಷ್ಟ್ರದಲ್ಲಿ 600 ಸಿನಿಮಾ ಹಾಲ್‌ಗಳಿವೆ.200 ಮುಂಬೈನಲ್ಲಿದೆ. ಮಹಾರಾಷ್ಟ್ರದಲ್ಲಿ 1.7 ಮಿಲಿಯನ್ ಕೊರೊನಾ ಸೋಂಕಿತರಿದ್ದಾರೆ, 44,128 ಮಂದಿ ಮೃತಪಟ್ಟಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 46254 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದೊಂದು ದಿನಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ. ಒಂದು ದಿನದಲ್ಲಿ 53,357 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 514 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

Recommended Video

Corona ಬಂದ್ರೆ ನೋ Tension | Corona Vaccine | Oneindia Kannada

ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
Cinema halls are finally set to reopen Thursday in Mumbai and the rest of Maharashtra after months of being shut down in the wake of the COVID-19 pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X