ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

24 ಗಂಟೆಗಳಲ್ಲೇ 138 ಮಂದಿ ಪೊಲೀಸರಿಗೆ ಕೊವಿಡ್-19 ಪಾಸಿಟಿವ್!

|
Google Oneindia Kannada News

ಮುಂಬೈ, ಜುಲೈ.30: ಕೊರೊನಾವೈರಸ್ ಸೋಂಕಿನ ಅಟ್ಟಹಾಸಕ್ಕೆ ಮಹಾರಾಷ್ಟ್ರಕ್ಕೆ ಮಹಾರಾಷ್ಟ್ರವೇ ತತ್ತರಿಸಿದೆ ಹೋಗಿದೆ. ರಾಜ್ಯದಲ್ಲಿನ ಕೊರೊನಾ ವಾರಿಯರ್ಸ್ ಗಳನ್ನೂ ಕೂಡಾ ಮಹಾಮಾರಿಗೆ ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ ಬರೋಬ್ಬರಿ 138 ಮಂದಿ ಪೊಲೀಸರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಮಹಾಮಾರಿಗೆ ಒಂದೇ ದಿನ ಇಬ್ಬರು ಪೊಲೀಸರು ಪ್ರಾಣ ಬಿಟ್ಟಿರುವುದು ವರದಿಯಾಗಿದೆ.

ಮಹಾರಾಷ್ಟ್ರದಲ್ಲಿ ಆಗಸ್ಟ್ 31ರವರೆಗೂ ಲಾಕ್‌ಡೌನ್ ವಿಸ್ತರಣೆಮಹಾರಾಷ್ಟ್ರದಲ್ಲಿ ಆಗಸ್ಟ್ 31ರವರೆಗೂ ಲಾಕ್‌ಡೌನ್ ವಿಸ್ತರಣೆ

ಮಹಾರಾಷ್ಟ್ರದಲ್ಲಿ ಇದುವರೆಗೂ ಒಟ್ಟು 9096 ಮಂದಿ ಪೊಲೀಸರಿಗೆ ಸೋಂಕು ತಗಲಿದ್ದು, 7084 ಮಂದಿ ಪೊಲೀಸರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1912 ಮಂದಿ ಸೋಂಕಿತ ಪೊಲೀಸರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಮಹಾಮಾರಿಗೆ ರಾಜ್ಯದಲ್ಲಿ 100ಕ್ಕೂ ಹೆಚ್ಚು ಮಂದಿ ಪೊಲೀಸರು ಪ್ರಾಣ ಬಿಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

Maharastra: 138 Police Personnels Get Coronavirus Positive In 24 Hours

ಮಹಾರಾಷ್ಟ್ರದಲ್ಲಿ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣ:

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಈಗಾಗಲೇ 4 ಲಕ್ಷದ ಗಡಿ ದಾಟಿದೆ. ರಾಜ್ಯದಲ್ಲಿ ಒಟ್ಟು 4,00,651 ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 2,39,755 ಸೋಂಕಿತರು ಗುಣಮುಖರಾಗಿದ್ದಾರೆ. 1,46,129 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ. ಇನ್ನು, ರಾಜ್ಯದಲ್ಲಿ ಇದುವರೆಗೂ ಮಹಾಮಾರಿಯಿಂದಾಗಿ 14,463 ಮಂದಿ ಉಸಿರು ಚೆಲ್ಲಿದ್ದಾರೆ.

English summary
Maharastra: 138 Police Personnels Get Coronavirus Positive In 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X