ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರಕ್ಕೆ ಕೇಂದ್ರ ತಂಡ ಹೊರಟಿದ್ದು ಏಕೆ ಗೊತ್ತಾ?

|
Google Oneindia Kannada News

ಮುಂಬೈ, ನವೆಂಬರ್.22: ಮಹಾರಾಷ್ಟ್ರದಲ್ಲಿ ಸರ್ಕಾರಪ ರಚನೆಗೆ ಕಸರತ್ತು ಜೋರಾಗಿ ನಡೆಯುತ್ತಿದೆ. ಮತ ಹಾಕಿದ ಮಂದಿ ನಿತ್ಯ ನರಕಯಾತನೆ ಅನುಭವಿಸುತ್ತಿದ್ದರೆ, ಎಲೆಕ್ಷನ್ ನಲ್ಲಿ ಗೆದ್ದ ನಾಯಕರು ಗದ್ದುಗೆ ಹಿಡಿಯಲು ಸಾಲು ಸಾಲು ಸಭೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಶಿವಸೇನೆಗೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷದ ನಾಯಕರು ಮೇಲಿಂದ ಮೇಲೆ ಸಭೆ ನಡೆಸಿ ಚರ್ಚಿಸುತ್ತಿದ್ದಾರೆ. ಸಾಮಾನ್ಯ ಕಾರ್ಯಕ್ರಮಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಸರ್ಕಾರ ರಚಿಸಿದ್ದೇ ಆದಲ್ಲಿ ಮೂರು ಪಕ್ಷಗಳು ಒಪ್ಪುವಂತಾ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಮೊದಲೇ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ.

8 ರೂಪಾಯಿಗೆ ಒಂದು ಕೆಜಿ ಈರುಳ್ಳಿ: ಕಣ್ಣೀರು ಒರೆಸಲು ಸರ್ಕಾರವೇ ಇಲ್ಲ8 ರೂಪಾಯಿಗೆ ಒಂದು ಕೆಜಿ ಈರುಳ್ಳಿ: ಕಣ್ಣೀರು ಒರೆಸಲು ಸರ್ಕಾರವೇ ಇಲ್ಲ

ಇದೆಲ್ಲ ರಾಜಕೀಯದ ಆಟವಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಅಸಲಿ ಪರಿಸ್ಥಿತಿಯೇ ಬೇರೆಯಿದೆ. ಸರ್ಕಾರವಿಲ್ಲದ ರಾಜ್ಯದಲ್ಲಿ ಜನರ ಗೋಳನ್ನು ಕೇಳುವವರೇ ಇಲ್ಲದಂತೆ ಆಗಿ ಬಿಟ್ಟಿದೆ. ವರುಣನ ಅಬ್ಬರಕ್ಕೆ ಮಹಾರಾಷ್ಟ್ರದ ಹಲವೆಡೆ ರೈತರು ಬೆಳೆದ ಬೆಳೆ ಹಾಳಾಗಿ ಹೋಗಿದೆ.

Maharastra Crop Damage: High Level Central Team Visit To Affected Area.

ಮಹಾರಾಷ್ಟ್ರದಲ್ಲಿ ಸಂಭವಿಸಿರುವ ಬೆಳೆ ಹಾನಿ ಪರಿಶೀಲನೇೆಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ಹೊರಟಿದೆ. ನವೆಂಬರ್.23ರಿಂದ ಮೂರು ದಿನಗಳ ಕಾಲ ಅಧಿಕಾರಿಗಳ ಕೇಂದ್ರ ಪರಿಶೀಲನಾ ತಂಡ ಮಹಾರಾಷ್ಟ್ರದ ಮಾರತ್ವಾಡ್ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳಲಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಿದ ಹೆಚ್ಚುವರಿ ಕಾರ್ಯದರ್ಶಿ ವಿ.ತ್ರಿಫಾಲ್, ಹೈದ್ರಾಬಾದ್ ನ ಕೃಷಿ ಅಭಿವೃದ್ಧಿ ಇಲಾಖೆ ನಿರ್ದೇಶಕ ಕೆ.ಮನೋಹರನ್, ಔರಂಗಬಾದ್ ವಿಭಾಗದ ಆಯುಕ್ತ ಸುನೀಲ್ ಕೇಂದ್ರೇಕರ್ ರನ್ನೊಳಗೊಂಡ ತಂಡ ಮೂರು ದಿನಗಳ ಕಾಲ ಪ್ರವಾಸ ನಡೆಸಿ, ಬೆಳೆಹಾನಿ ಬಗ್ಗೆ ಪರಿಶೀಲನೆ ನಡೆಸಲಿದೆ. ಈ ಹಿಂದೆ ವಿಭಾಗೀಯ ಅಧಿಕಾರಿಗಳು ಸಲ್ಲಿಸಿದ್ದ ವರದಿಯಲ್ಲಿ ಮಳೆಯಿಂದ 3 ಸಾವಿರದ 350 ಕೋಟಿ ಮೌಲ್ಯದ ಬೆಳೆ ಹಾನಿಯಾಗಿರುವ ಬಗ್ಗೆ ವರದಿ ಸಲ್ಲಿಸಿದ್ದರು.

English summary
Maharastra Crop Damage: High Level Central Team Visit To Affected Area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X