• search
 • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಬಲೆಗೆ ಮೀನುಗಾರಿಕೆ ಸಚಿವರು!

|

ಮುಂಬೈ, ಜುಲೈ.20: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪ್ರಮಾಣವು ದಿನದಿಂದ ದಿನಕ್ಕೆ ಗಣನೀಯ ಏರಿಕೆ ಕಂಡು ಬಂದಿದೆ. ರಾಜ್ಯದಲ್ಲಿ ಜನಸಾಮಾನ್ಯರಷ್ಟೇ ಅಲ್ಲದೇ ಜನಪ್ರತಿನಿಧಿಗಳ ಎದೆಯಲ್ಲೂ ನಡುಕ ಹುಟ್ಟಿಸುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.

   Leopard enters home and takes away pet dog | Oneindia kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಮಹಾರಾಷ್ಟ್ರದ ಜವಳಿ, ಬಂದರು, ಮೀನುಗಾರಿಕೆ ಮತ್ತು ರಕ್ಷಕರ ಸಚಿವ ಅಸ್ಲಂ ಶೇಖ್ ಅವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿರುವ ಬಗ್ಗೆ ಸ್ವತಃ ಸಚಿವರೇ ಸ್ಪಷ್ಟಪಡಿಸಿದ್ದಾರೆ.

   ಮಹಾರಾಷ್ಟ್ರ: ಕೊವಿಡ್ ಕ್ವಾರಂಟೈನ್ ಕೇಂದ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ

   ಕೊವಿಡ್-19 ತಪಾಸಣೆ ನಡೆಸಿದ ಸಂದರ್ಭದಲ್ಲಿ ನನಗೆ ಸೋಂಕು ತಗಲಿರುವುದು ದೃಢಪಟ್ಟಿದ್ದು, ಸದ್ಯದ ಮಟ್ಟಿಗೆ ನಾನು ಸೆಲ್ಫ್ ಹೋಮ್ ಕ್ವಾರೆಂಟೈನ್ ನಲ್ಲಿ ಇದ್ದೇನೆ ಎಂದು ಸಚಿವ ಅಸ್ಲಂ ಶೇಖ್ ಟ್ವೀಟ್ ಮಾಡಿದ್ದಾರೆ.

   ಸ್ನೇಹಿತರು ಮತ್ತು ಬೆಂಬಲಿಗರಿಗೆ ಸಂದೇಶ:

   ಕೊರೊನಾವೈರಸ್ ಸೋಂಕು ತಗಲಿರುವುದು ಖಾತ್ರಿಯಾಗುತ್ತಿದ್ದಂತೆ ಜವಳಿ, ಬಂದರು, ಮೀನುಗಾರಿಕೆ ಮತ್ತು ರಕ್ಷಕರ ಸಚಿವ ಅಸ್ಲಂ ಶೇಖ್ ತಮ್ಮ ಬೆಂಬಲಿಗರು ಮತ್ತು ಸ್ನೇಹಿತರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ನನ್ನ ಜೊತೆಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕವನ್ನು ಹೊಂದಿರುವ ಪ್ರತಿಯೊಬ್ಬರು ಕೂಡಾ ಕೊವಿಡ್-19 ಟೆಸ್ಟ್ ಮಾಡಿಸಿಕೊಳ್ಳುವಂತೆ ಟ್ವಿಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

   ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ವಿರುದ್ಧ ಯುದ್ಧದ ರೀತಿಯಲ್ಲಿ ಹೋರಾಡಬೇಕಾದಂತಹ ಪರಿಸ್ಥಿತಿಯಿದೆ. ಈ ಹಿನ್ನೆಲೆಯ ನಾನು ಮನೆಯಲ್ಲಿದ್ದುಕೊಂಡೇ ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

   English summary
   Maharastra Minister Aslam Shaikh Tests Positive For Coronavirus.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X