ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿತ, 7ಕ್ಕೂ ಅಧಿಕ ಮಂದಿ ಸಾವು

Posted By:
Subscribe to Oneindia Kannada

ಮುಂಬೈ, ಜುಲೈ 31: ಇಲ್ಲಿನ ಭಿವಂಡಿಯ ಗೈಬಿ ನಗರದ ಪ್ರದೇಶದಲ್ಲಿರುವ ಕಟ್ಟಡವೊಂದು ಭಾನುವಾರ ಬೆಳಗ್ಗೆ ಕುಸಿದಿದೆ. ಈ ದುರ್ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಕಟ್ಟಡದ ಅವಶೇಷಗಳ ಅಡಿಯಲ್ಲಿ 20 ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಸುರಿದ ಭಾರಿ ಮಳೆ, ಭಾನುವಾರವೂ ಮುಂದುವರೆದಿದ್ದು, ರಕ್ಷಣಾ ಕಾರ್ಯಕ್ಕೆ ಅಡ್ಡಿಯುಂಟಾಗಿದೆ.

ಶಿಥಿಲಗೊಂಡಿದ್ದ ಹಳೆಯ ಕಟ್ಟಡ ಭಾರಿ ಮಳೆಯ ಹೊಡೆತಕ್ಕೆ ಸಿಲುಕಿ ಭಾನುವಾರ ಬೆಳಗ್ಗೆ 9.17ರ ಸುಮಾರಿಗೆ ಕುಸಿದಿದೆ. ಬೃಹನ್ ಮುಂಬೈ ಮಹಾನಗರ ಪಾಲಿಕೆಯಿಂದ ಈ ಕಟ್ಟಡಕ್ಕೆ ಈಗಾಗಲೇ ನೋಟಿಸ್ ನೀಡಲಾಗಿತ್ತು. ಕಟ್ಟಡ ವಾಸಿಸಲು ಯೋಗ್ಯವಾಗಿಲ್ಲ, ಶಿಥಿಲಗೊಂಡಿದ್ದು, ಯಾವುದೇ ಸಮಯದಲ್ಲಿ ಕುಸಿಯಬಹುದು ಎಂದು ಎಚ್ಚರಿಸಲಾಗಿತ್ತು.

Many killed, over 20 trapped in Bhiwandi building collapse

ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿ 25 ಮಂದಿಯನ್ನು ರಕ್ಷಿಸಿದ್ದಾರೆ. ಆದರೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಕಂಡು ಬಂದಿದೆ.

ಭಾರಿ ಮಳೆಯ ಕಾರಣ ಸ್ಥಳೀಯ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಛತ್ರಪತಿ ಶಿವಾಜಿ ಟರ್ಮಿನಸ್(ಸಿಎಸ್ ಟಿ) ಕಡೆ ಹೊರಟ ರೈಲುಗಳ ಮಾರ್ಗ ಬದಲಾಗಿದೆ.


ಪಾರ್ಸಿಕ್ ಟನಲ್ ನಲ್ಲಿ ತೊಂದರೆ ಕಾಣಿಸಿಕೊಂಡಿದೆ. ಮುಂಬೈನ ತಗ್ಗು ಪ್ರದೇಶದಲ್ಲಿ ನೀರು ನಿಂತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mumbai: Over Seven dead and more than 20 trapped under the debris of three story building which collapsed Sunday morning at Bhiwandi.
Please Wait while comments are loading...