ಬಿಜೆಪಿ ಹಳೆದೋಸ್ತಿ ಶಿವಸೇನೆಯಿಂದ ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ
ಮುಂಬೈ, ಫೆಬ್ರವರಿ 28: ಮಹಾರಾಷ್ಟ್ರದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.
ಈ ಕುರಿತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಮಾಹಿತಿ ನೀಡಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ.5 ಮೀಸಲಾತಿ ನೀಡುವ ಮಸೂದೆಯನ್ನು ಮಹಾ ವಿಕಾಸ್ ಅಘಾಡಿ ಸರ್ಕಾರವು ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಮಂಡಿಸಲಿದೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶಿವಸೇನೆ ಮತ್ತು ಎನ್ಸಿಪಿ ಪಕ್ಷಗಳ ಮೈತ್ರಿ ಸರ್ಕಾರ ಆಡಳಿತದಲ್ಲಿದ್ದು, ಮಾರ್ಚ್ 6ರಂದು 2020-21ನೇ ಸಾಲಿನ ವಾರ್ಷಿಕ ಬಜೆಟ್ ಮಂಡನೆ ಮಾಡಲಿವೆ. ಅದರ ಜತೆಯಲ್ಲಿ ಉದ್ಯೋಗಗಳಲ್ಲಿಯೂ ಮೀಸಲಾತಿ ನೀಡುವ ಯೋಜನೆಯಿದ್ದು ಅದಕ್ಕೆ ಸರ್ಕಾರವು ಕಾನೂನು ಸಲಹೆ ಪಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದಿನ ಉದ್ಧವ್ ಠಾಕ್ರೆ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರಲಿಲ್ಲ. ಕಳೆದ ವರ್ಷ ಮರಾಠಿಗರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿಕೊಡಲಾಗಿತ್ತು. ಮರಾಠಿಗರಿಗೆ ಶೇ.16-13ಕ್ಕೆ ಮೀಸಲಾತಿ ಇಳಿಕೆ ಮಾಡಲಾಗಿತ್ತು.












Click it and Unblock the Notifications