ಮೋದಿ ಸರ್ಕಾರ್ 2ನಲ್ಲಿ ಶಿವಸೇನೆಯ ಅರವಿಂದ್ ಗೆ ಸ್ಥಾನ
ಮುಂಬೈ, ಮೇ 30: ಬಿಜೆಪಿಯ ಮಿತ್ರಪಕ್ಷ ಶಿವಸೇನೆಯ ಸಂಸದರಿಗೆ ಮೋದಿ 2.0 ಸರ್ಕಾರದಲ್ಲಿ ಸಚಿವ ಸಂಪುಟ ಸೇರುವ ಅವಕಾಶ ಮೊದಲಿಗೆ ಸಿಗಲಿದೆ. ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ.
ಲೋಕಸಭೆ ಚುನಾವಣೆ 2019ರಲ್ಲಿ ಮೋದಿ ನೇತೃತ್ವ ಬಿಜೆಪಿ ಅಭೂತಪೂರ್ವ ಜಯ ದಾಖಲಿಸಿದ್ದಲ್ಲದೆ, ಎದುರಾಳಿಯ ಎದೆಯಲ್ಲಿ ನಡುಕ ಹುಟ್ಟಿಸಿದೆ. ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 300 ಗಡಿ ದಾಟಿದ ಭಾರತೀಯ ಜನತಾ ಪಕ್ಷವು 2 ಸ್ಥಾನದಿಂದ ಆರಂಭಿಸಿ 303 ಸ್ಥಾನಕ್ಕೇರಿದೆ. ಆದರೆ, ಮಿತ್ರಪಕ್ಷಗಳಾದ ಶಿವಸೇನಾ, ಜೆಡಿಯು, ಎಐಎಡಿಎಂಕೆ ಹಾಗೂ ಅಪ್ನಾದಳ್ ನ ಸಂಸದರಿಗೂ ಮೋದಿ ಸಚಿವ ಸ್ಥಾನ ಕಲ್ಪಿಸಲು ಮುಂದಾಗಿದ್ದಾರೆ.
ಈ ನಿಟ್ಟಿನಲ್ಲಿ ಶಿವಸೇನಾದ ಮುಂಬೈ ದಕ್ಷಿಣದ ಸಂಸದ ಅರವಿಂದ್ ಸಾವಂತ್ ಗೆ ಸಚಿವ ಸ್ಥಾನ ಸಿಗಲಿದೆ ಎಂದು ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ. 'ಉದ್ಧವ್ ಅವರು ಅರವಿಂದ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ, ಅರವಿಂದ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ' ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಈ ಹಿಂದಿನ ಮೋದಿ ಸರ್ಕಾರದಲ್ಲಿ ಶಿವಸೇನಾದ ಏಕೈಕ ಸಚಿವರಾಗಿ ಅನಂತ್ ಗೀತೆ ಇದ್ದರು. ಆದರೆ, ಈ ಬಾರಿ ರಾಯ್ ಘಡದಿಂದ ಸ್ಪರ್ಧಿಸಿದ್ದ ಅನಂತ್ ಗೀತೆ ಅವರು ಸೋಲು ಕಂಡಿದ್ದಾರೆ. 68 ವರ್ಷ ವಯಸ್ಸಿನ ಅರವಿಂದ್ ಅವರು ಕಾಂಗ್ರೆಸ್ಸಿನ ಮಿಲಿಂದ್ ದಿಯೋರಾ ಅವರನ್ನು 1,00,067 ಮತಗಳ ಅಂತರದಿಂದ ಸೋಲಿಸಿದರು.
ಮಹಾನಗರ್ ಟೆಲಿಫೋನ್ ನೆಟ್ವರ್ಕ್ ಲಿಮಿಟೆಡ್ (ಎಂಟಿಎನ್ ಎಲ್) ನಲ್ಲಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿ, ಸ್ವಯಂ ನಿವೃತ್ತಿ ಪಡೆದ ಅರವಿಂದ್, ಎಂಎಲ್ಸಿಯಾದರು. ಶಿವಸೇನಾ-ಬಿಜೆಪಿ ಸರ್ಕಾರದ ಬೆಂಬಲದಿಂದ 2014ರಲ್ಲಿ ಕೂಡಾ ಮಿಲಿಂದ್ ದಿಯೋರಾರನ್ನು 1,28,564 ಮತಗಳ ಅಂತರದಿಂದ ಸೋಲಿಸಿದ್ದರು. ಎಂಟಿಎನ್ ಎಲ್ ಟ್ರೇಡ್ ಯೂನಿಯನ್ ಅಧ್ಯಕ್ಷ, ಶಿವಸೇನಾದಲ್ಲಿ ಪ್ರಮುಖ ಮುಖಂಡರಾಗಿರುವ ಅರವಿಂದ್ ಅವರು ಮೋದಿ ಸಂಪುಟ ಸೇರಲು ಕಾತುರರಾಗಿದ್ದಾರೆ.
ಮೇ 30ರಂದು ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ 6 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಭಾಗವಹಿಸಲಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications