• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭ್ರಷ್ಟಾಚಾರ ಕೇಸ್: ಅನಿಲ್ ದೇಶ್‌ಮುಖ್ ಮನೆ ಮೇಲೆ 'ಇಡಿ' ದಾಳಿ

|
Google Oneindia Kannada News

ಮುಂಬೈ, ಜೂನ್ 25: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಸಿಲುಕಿಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನಿಲ್ ದೇಶ್‌ಮುಖ್ ಮನೆ ಮೇಲೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಅನಿಲ್ ದೇಶ್‌ಮುಖ್ ಆದೇಶಿಸಿದ್ದರು ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

100 ಕೋಟಿ ಸುಲಿಗೆಗೆ ಅನಿಲ್ ದೇಶ್‌ಮುಖ್ ಸೂಚಿಸಿದ್ದು ನಿಜ: ಎನ್‌ಐಗೆ ಸಚಿನ್ ವಾಜೆ ಪತ್ರ100 ಕೋಟಿ ಸುಲಿಗೆಗೆ ಅನಿಲ್ ದೇಶ್‌ಮುಖ್ ಸೂಚಿಸಿದ್ದು ನಿಜ: ಎನ್‌ಐಗೆ ಸಚಿನ್ ವಾಜೆ ಪತ್ರ

ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಪೋಟಕ ವಾಹನ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರ ನಗರ ಪೊಲೀಸ್‌ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಪರಮ್‌ ಬೀರ್‌ ಸಿಂಗ್‌ ಅವರು ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದು ವಿವರಣೆ ನೀಡಿದ ಬಳಿಕ ಅನಿಲ್ ವಿರುದ್ಧ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶಿಸಿತ್ತು.

ಸಿಬಿಐ ಪ್ರಾಥಮಿಕ ತನಿಖೆ ಬಳಿಕ ಎಫ್ಐಆರ್ ದಾಖಲಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಕೂಡಾ ಮನಿಲಾಂಡ್ರಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದಿದೆ. ಹೈಕೋರ್ಟ್ ತನಿಖೆ ಆದೇಶ ನೀಡುತ್ತಿದ್ದಂತೆ ಏಪ್ರಿಲ್ 5ರಂದು ನೈತಿಕ ಹೊಣೆ ಹೊತ್ತು ಗೃಹ ಸಚಿವ ಸ್ಥಾನಕ್ಕೆ ಹಿರಿಯ ಎನ್ ಸಿಪಿ ನಾಯಕ ಅನಿಲ್ ದೇಶ್ ಮುಖ್ ರಾಜೀನಾಮೆ ಸಲ್ಲಿಸಿದ್ದರು.

English summary
The Enforcement Directorate on Friday conducted a search operation at the house of former Maharashtra Home Minister Anil Deshmukh, who is facing allegations of corruption and misconduct
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X