ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಕೇಶ್ ಅಂಬಾನಿ ಮನೆ ಸಮೀಪ ಸ್ಫೋಟಕ ಕೇಸ್; ಸಚಿನ್ ಅರೆಸ್ಟ್

|
Google Oneindia Kannada News

ಮುಂಬೈ, ಮಾರ್ಚ್ 14: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಪೊಲೀಸ್ ಇನ್‌ಸ್ಪೆಕ್ಟರ್ ಸಚಿನ್ ವಾಜೆ ಅವರನ್ನು ಬಂಧಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು ಶನಿವಾರ ತಡರಾತ್ರಿ ಸಚಿನ್ ವಾಜೆ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ನಿಗೂಢ ರೀತಿಯಲ್ಲಿ ಮೃತಪಟ್ಟ ಆಟೊ ಬಿಡಿಭಾಗಗಳ ಮಾರಾಟಗಾರ ಮನ್ಸುಖ್ ಹಿರೇನ್ ಸಾವಿಗೆ ಸಚಿನ್ ಕಾರಣ ಎಂದು ಮನ್ಸುಖ್ ಪತ್ನಿ ಆರೋಪಿಸಿದ್ದರು. ವಿಚಾರಣೆಗೆ ಹಾಜರಾಗಿದ್ದ ಸಚಿನ್ ಅವರನ್ನು ಸುಮಾರು 12 ಗಂಟೆಗಳ ಕಾಲ ಪ್ರಶ್ನಿಸಿ ನಂತರ ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ.

ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣ: ನಿಗೂಢ ಸಾವಿನ ಹಿಂದೆ ಪೊಲೀಸ್ ಅಧಿಕಾರಿ ಕೈವಾಡ?ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣ: ನಿಗೂಢ ಸಾವಿನ ಹಿಂದೆ ಪೊಲೀಸ್ ಅಧಿಕಾರಿ ಕೈವಾಡ?

ಫೆಬ್ರವರಿ 25ರಂದು ದಕ್ಷಿಣ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ಅವರ ಅಂಟಿಲಿಯಾ ನಿವಾಸದ ಎದುರು ಸ್ಫೋಟಕಗಳು ಹಾಗೂ ಬೆದರಿಕೆ ಪತ್ರವಿದ್ದ ಸ್ಕಾರ್ಪಿಯೋ ವಾಹನ ಪತ್ತೆಯಾಗಿತ್ತು. ಅದರ ಮೂಲ ಮಾಲೀಕ ಥಾಣೆಯ ನಿವಾಸಿ ಮನ್ಸುಖ್ ಹಿರೇನ್, ತಮ್ಮ ವಾಹನ ಕಳುವಾಗಿತ್ತು ಎಂದು ಹೇಳಿದ್ದರು. ಮಾರ್ಚ್ 5ರಂದು ಥಾಣೆಯ ಕೊಳ್ಳವೊಂದರಲ್ಲಿ ಅವರ ಶವ ಪತ್ತೆಯಾಗಿತ್ತು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಮನ್ಸುಖ್ ಪತ್ನಿ ವಿಮಲಾ ಆರೋಪವೇನು

ಮನ್ಸುಖ್ ಪತ್ನಿ ವಿಮಲಾ ಆರೋಪವೇನು

ಪೀಟರ್ ನ್ಯೂಟನ್ ಎಂಬುವವರು ಈ ಸ್ಕಾರ್ಪಿಯೋ ಕಾರ್‌ನ ಮೂಲ ಮಾಲೀಕ. ಆದರೆ ಅವರ ಸಮ್ಮತಿಯೊಂದಿಗೆ ಮೂರು ವರ್ಷಗಳಿಂದ ಅದನ್ನು ತಾವು ಬಳಸುತ್ತಿದ್ದುದ್ದಾಗಿ ಮನ್ಸುಖ್ ಪತ್ನಿ ವಿಮಲಾ ತಿಳಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ತಮ್ಮ ಗಂಡನಿಂದ ಇನ್‌ಸ್ಪೆಕ್ಟರ್ ವಾಜೆ ಸ್ಕಾರ್ಪಿಯೋವನ್ನು ತೆಗೆದುಕೊಂಡು ಹೋಗಿದ್ದರು. ಆದರೆ ಕೆಲವು ತಿಂಗಳ ಬಳಿಕ ಅದನ್ನು ವಾಪಸ್ ನೀಡಿದ್ದರು ಎಂದು ಹೇಳಿದ್ದಾರೆ. '2020ರ ನವೆಂಬರ್‌ನಲ್ಲಿ ಸಚಿನ್ ವಾಜೆ ಸ್ಕಾರ್ಪಿಯೋ ತೆಗೆದುಕೊಂಡು ಹೋಗಿದ್ದರು. ನನ್ನ ಪತಿ ಅವರಿಗೆ ಬಹುಕಾಲದಿಂದ ಪರಿಚಯ. ಫೆ. 2ರಂದು ವಾಜೆ ಅವರು ತಮ್ಮ ಚಾಲಕ ಮೂಲಕ ಕಾರನ್ನು ಮರಳಿಸಿದ್ದರು. ಬಳಿಕ ಅದನ್ನು ನನ್ನ ಪತಿ ನಿತ್ಯ ಬಳಸುತ್ತಿದ್ದರು. ಆದರೆ ಅದರಲ್ಲಿ ತಾಂತ್ರಿಕ ಸಮಸ್ಯೆಗಳು ಬರುತ್ತಿದ್ದವು. ಫೆ. 17ರಂದು ಮುಂಬೈ ಕಡೆಗೆ ಹೋಗುವಾಗ ವಿಖ್ರೋಲಿ ಪ್ರದೇಶದ ಬಳಿ ಚಕ್ರಗಳು ಜಾಮ್ ಆಗಿದ್ದರಿಂದ ಅಲ್ಲಿಯೇ ನಿಲ್ಲಿಸಿ ಮನೆಗೆ ವಾಪಸ್ ಆಗಿದ್ದರು. ಆದರೆ ಮರು ದಿನ ಅಲ್ಲಿಗೆ ಹೋದಾಗ ಕಾರು ಇರಲಿಲ್ಲ. ಈ ಬಗ್ಗೆ ವಿಖ್ರೋಲಿ ಪೊಲೀಸರಿಗೆ ದೂರು ಕೂಡ ಸಲ್ಲಿಸಿದ್ದರು' ಎಂದು ಅವರು ವಿವರಿಸಿದ್ದಾರೆ.

ವಾಜೆ ಅವರೇ ನನ್ನ ಗಂಡನನ್ನು ಕೊಂದಿರಬಹುದು

ವಾಜೆ ಅವರೇ ನನ್ನ ಗಂಡನನ್ನು ಕೊಂದಿರಬಹುದು

'ನನ್ನ ಪತಿಯ ದೇಹ ಪತ್ತೆಯಾದಾಗ ಅವರ ಮುಖದ ಸುತ್ತಲೂ ಒಂದು ಸ್ಕಾರ್ಫ್ ಇತ್ತು. ಚೆನ್ನಾಗಿ ಸುತ್ತಿದ ಐದಾರು ಸ್ಕಾರ್ಫ್‌ಗಳು ಅವರ ಜೇಬಿನಲ್ಲಿದ್ದವು. ನನ್ನ ಪತಿ ಒಳ್ಳೆಯ ಈಜುಗಾರ. ಅವರು ಮುಳುಗಿ ಸಾಯಲು ಸಾಧ್ಯವೇ ಇಲ್ಲ. ಅವರು ಮನೆಯಿಂದ ಹೋಗುವಾಗ ಕಪ್ಪು ಮಾಸ್ಕ್ ಧರಿಸಿದ್ದರು. ಮೊಬೈಲ್ ಫೋನ್, ಚಿನ್ನದ ಸರ, ವಾಚ್, ಪರ್ಸ್, ವಿವಿಧ ಎಟಿಎಂ ಕಾರ್ಡ್‌ಗಳು ಮತ್ತು ಸ್ವಲ್ಪ ಹಣ ಇತ್ತು. ಆದರೆ ಅವರ ಮೃತದೇಹದೊಂದಿಗೆ ಇದಾವುದೂ ಇರಲಿಲ್ಲ. ಹೀಗಾಗಿ ನನ್ನ ಗಂಡನನ್ನು ಕೊಲೆ ಮಾಡಲಾಗಿದೆ ಎಂದು ನಂಬುತ್ತೇನೆ. ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರೇ ನನ್ನ ಗಂಡನನ್ನು ಕೊಂದಿರಬಹುದು' ಎಂದು ಅವರು ಆರೋಪಿಸಿದ್ದಾರೆ.

ಸಚಿನ್ ವಾಜೆ ಹೇಳಿಕೆ ದಾಖಲಿಸಿಕೊಂಡಿದ್ದ ಎಟಿಎಸ್

ಸಚಿನ್ ವಾಜೆ ಹೇಳಿಕೆ ದಾಖಲಿಸಿಕೊಂಡಿದ್ದ ಎಟಿಎಸ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ(ಎಟಿಎಸ್) ದಳದ ಅಧಿಕಾರಿಗಳು ಕಳೆದ ವಾರವೇ ಸಚಿನ್ ವಾಜೆ ಹೇಳಿಕೆ ದಾಖಲಿಸಿಕೊಂಡಿದ್ದರು. ಮನ್ಸುಖ್ ಬಳಿ ಇದ್ದ ಎಸ್‌ಯುವಿ ಬಳಕೆ ಮಾಡಿಲ್ಲ ಎಂದು ವಾಜೆ ಹೇಳಿದ್ದರು. ಇದಾದ ಬಳಿಕ ಬಂಧನದ ಭೀತಿ ಎದುರಾಗಿ, ಥಾಣೆ ಕೋರ್ಟಿನಲ್ಲಿ ಬಂಧನ ಮಾಡದಂತೆ ಜಾಮೀನು ಕೋರಿದ್ದರು. ಆದರೆ, ಕೊಲೆ, ಸಾಕ್ಷ್ಯ ನಾಶದಂಥ ಗುರುತರ ಆರೋಪವಿದ್ದು, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿತ್ತು.

ಎನ್‌ಕೌಂಟರ್ ತಜ್ಞ ಸಚಿನ್ ವಾಜೆ

ಎನ್‌ಕೌಂಟರ್ ತಜ್ಞ ಸಚಿನ್ ವಾಜೆ

ಎನ್‌ಕೌಂಟರ್ ತಜ್ಞರಾಗಿದ್ದ ಸಚಿನ್ ವಾಜೆ ಸುಮಾರು 63 ಎನ್‌ಕೌಂಟರ್‌ಗಳಲ್ಲಿ ಪಾಲ್ಗೊಂಡಿದ್ದರು. 2004ರಲ್ಲಿ ಖ್ವಾಜಾ ಯೂನುಸ್ ಎಂಬಾತನ ಲಾಕಪ್ ಡೆತ್ ಕೇಸಿನಲ್ಲಿ ಆರೋಪಿಯಾಗಿ ವಾಜೆ ಸೇವೆಯಿಂದ ಅಮಾನತುಗೊಂಡಿದ್ದರು. ಜೂನ್ 2020ರಲ್ಲಿ ಕರ್ತವ್ಯಕ್ಕೆ ಪುನಃ ಮರಳಿದ್ದರು. ಮುಂಬೈ ಕ್ರೈಂ ವಿಭಾಗದ ಸಿಐಯುನಲ್ಲಿದ್ದ ವಾಜೆ ಅವರು ಬಿಜೆಪಿಯ ತೀವ್ರ ಆಕ್ರೋಶ ಎದುರಿಸಬೇಕಾಯಿತು. ನಂತರ ನಾಗರಿಕ ಸೌಲಭ್ಯ ಕೇಂದ್ರ(ಸಿಎಫ್ ಸಿ) ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

ಟಿಆರ್‌ಪಿ ಹಗರಣ, ನಕಲಿ ಸಾಮಾಜಿಕ ಜಾಲ ತಾಣ ಹಿಂಬಾಲಕ ಸೃಷ್ಟಿ ಕೇಸ್, ದಿಲೀಪ್ ಛಾಬ್ರಿಯಾ ಕಾರು ವಿನ್ಯಾಸ ಹಗರಣ ಮುಂತಾದ ಹೈ ಪ್ರೊಫೈಲ್ ಕೇಸುಗಳನ್ನು ವಾಜೆ ನಿಭಾಯಿಸುತ್ತಿದ್ದರು.

English summary
Mukesh Ambani bomb threat case: Sachin Vaze, an assistant police inspector has been arrested by the National Investigation Agency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X