ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೌಹಾರಿಸುತ್ತೆ ಅಂಕಿ-ಸಂಖ್ಯೆ: ಮುಂಬೈನಲ್ಲಿ ಶೇ.475ರಷ್ಟು ಕೊರೊನಾ ಏರಿಕೆ!

|
Google Oneindia Kannada News

ಮುಂಬೈ, ಏಪ್ರಿಲ್ 1: ಭಾರತದಲ್ಲಿ ಪ್ರತಿನಿತ್ಯ 50 ರಿಂದ 70 ಸಾವಿರ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಪೈಕಿ ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಅತಿಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ.

ಮಹಾರಾಷ್ಟ್ರದ ಮುಂಬೈನಲ್ಲಿ ಪತ್ತೆಯಾದ ಕೊವಿಡ್-19 ಸೋಂಕಿತ ಪ್ರಕರಣಗಳಲ್ಲಿ ಶೇ.475ರಷ್ಟು ಹೆಚ್ಚಾಗಿದೆ. ಮಾರ್ಚ್ ತಿಂಗಳಿನಲ್ಲೇ 88,170 ಮಂದಿಗೆ ಕೊರೊನಾವೈರಸ್ ಪ್ರಕರಣ ಪತ್ತೆಯಾಗಿವೆ ಎಂದು ಮುಂಬೈ ಮಹಾನಗರ ಪಾಲಿಕೆ ಮಾಹಿತಿ ನೀಡಿದೆ.

ಕೋವಿಡ್ 19: ಯಾವ ರಾಜ್ಯಗಳಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಕೋವಿಡ್ 19: ಯಾವ ರಾಜ್ಯಗಳಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ಕಳೆದ ಫೆಬ್ರವರಿ ತಿಂಗಳಿನಲ್ಲಿ 18359 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಜನವರಿ ತಿಂಗಳಿನಲ್ಲಿ 16328 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದವು ಎಂದು ಪಾಲಿಕೆ ಸ್ಪಷ್ಟಪಡಿಸಿದೆ.

70 ಸಾವಿರಕ್ಕಿಂತಲೂ ಹೆಚ್ಚು ಹೊಸ ಕೊವಿಡ್-19 ಕೇಸ್

70 ಸಾವಿರಕ್ಕಿಂತಲೂ ಹೆಚ್ಚು ಹೊಸ ಕೊವಿಡ್-19 ಕೇಸ್

ಮುಂಬೈನಲ್ಲಿ ಮಾರ್ಚ್ ತಿಂಗಳಿನಲ್ಲಿ 88170 ಮಂದಿಗೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ ಫೆಬ್ರವರಿ ತಿಂಗಳಿಗೆ ಹೋಲಿಸಿದ್ದಲ್ಲಿ 70351 ಹೆಚ್ಚು ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಅದೇ ಅಂಕಿ-ಸಂಖ್ಯೆಯನ್ನು ಜನವರಿ ತಿಂಗಳಿಗೆ ಹೋಲಿಕೆ ಮಾಡಿದ್ದಲ್ಲಿ 72382 ಹೆಚ್ಚು ಹೊಸ ಪ್ರಕರಣಗಳು ಮಾರ್ಚ್ ತಿಂಗಳಿನಲ್ಲಿ ವರದಿಯಾಗಿವೆ.

ಮಾರ್ಚ್ ತಿಂಗಳಿನಲ್ಲಿ ಮೃತಪಟ್ಟವರ ಸಂಖ್ಯೆ

ಮಾರ್ಚ್ ತಿಂಗಳಿನಲ್ಲಿ ಮೃತಪಟ್ಟವರ ಸಂಖ್ಯೆ

ಮುಂಬೈನಲ್ಲಿ ಕೊರೊನಾವೈರಸ್ ಸೋಂಕಿನಿಂದ ಮಾರ್ಚ್ ತಿಂಗಳಿನಲ್ಲಿ 216 ಮಂದಿ ಪ್ರಾಣ ಬಿಟ್ಟಿದ್ದಾರೆ. ಫೆಬ್ರವರಿ ತಿಂಗಳಿಗೆ ಹೋಲಿಸಿದ್ದಲ್ಲಿ 181 ಹೆಚ್ಚು ಸಾವಿನ ಪ್ರಕರಣ ವರದಿಯಾಗಿವೆ. ಫೆಬ್ರವರಿಯಲ್ಲಿ 119 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದರು. ಇನ್ನು, ಜನವರಿ ತಿಂಗಳಿನಲ್ಲಿ 237 ಮಂದಿ ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದರು ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಕೊವಿಡ್-10 ಸಕ್ರಿಯ ಪ್ರಕರಣಗಳ ಸಂಖ್ಯೆ 5.29 ಪಟ್ಟು ಹೆಚ್ಚಳ

ಕೊವಿಡ್-10 ಸಕ್ರಿಯ ಪ್ರಕರಣಗಳ ಸಂಖ್ಯೆ 5.29 ಪಟ್ಟು ಹೆಚ್ಚಳ

ಮಾರ್ಚ್ 31ರ ಅಂಕಿ-ಅಂಶಗಳ ಪ್ರಕಾರ, ಮುಂಬೈನಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 4,14,714ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಈವರೆಗೂ 11686 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ 9715 ಸಕ್ರಿಯ ಪ್ರಕರಣಗಳಿದ್ದು, ಮಾರ್ಚ್ ತಿಂಗಳಾಂತ್ಯದ ವೇಳೆಗೆ 51411 ಸಕ್ರಿಯ ಪ್ರಕರಣಗಳಿವೆ. ಫೆಬ್ರವರಿ ತಿಂಗಳಲ್ಲಿ ಗುಣಮುಖರ ಪ್ರಮಾಣ ಶೇ.93ರಷ್ಟಿದ್ದು, ಮಾರ್ಚ್ ತಿಂಗಳಿನಲ್ಲಿ ಶೇ.85ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ

ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ

ರಾಜ್ಯದಲ್ಲಿ ಒಂದೇ ದಿನದಲ್ಲಿ 39544 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 227 ಜನರು ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 54,649ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 28,12,980ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 23,600 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 24,00,727ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 3,56,243 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Mumbai: 88710 Coronavirus Cases Reports In Single Month; 475 per cent Rise In March.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X