ಮುಂಬೈಯಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ
ಮುಂಬೈ, ಮೇ 11: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಪೊಲಿಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈಯಲ್ಲಿ ಇಂದು(ಮೇ 11) ನಡೆದಿದೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿಮಾಂಶು ರಾಯ್ ಎಂಬುವವರು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕೆಲವು ಮೂಲಗಳು ತಿಳಿಸಿವೆಯಾದರೂ ಆತ್ಮಹತ್ಯೆಗೆ ನಿಖರ ಕಾರಣ ಲಭ್ಯವಾಗಿಲ್ಲ.

1988 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ರಾಯ್ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
2013 ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸೇರಿದಂತೆ ಹಲವು ಮಹತ್ವದ ಪ್ರಕರಣಗಳ ತನಿಖೆಗೆ ಇವರು ಮುಂದಾಳತ್ವ ವಹಿಸಿದ್ದರು.
ಇತ್ತೀಚೆಗೆ ಅನಾರೊಗ್ಯದ ಕಾರಣ ರಜಾ ಪಡೆದಿದ್ದ ಅವರು ಇದ್ದಕ್ಕಿದ್ದಂತಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.












Click it and Unblock the Notifications