ಥಾಣೆ ಮೇಯರ್ ವಿೂನಾಕ್ಷಿ ಪೂಜಾರಿಗೆ ಬಿಲ್ಲವ ಸಂಘದಿಂದ ಸನ್ಮಾನ
ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಮುಂಬೈ ಬಿಲ್ಲವರ ಅಸೋಸಿಯೇಶನ್ ವತಿಯಿಂದ ಥಾಣೆ ಮಹಾನಗರ ಪಾಲಿಕೆ ನೂತನ ಮೇಯರ್ ಮೀನಾಕ್ಷಿ ಪೂಜಾರಿಯವರನ್ನು ಸನ್ಮಾನಿಸಲಾಯಿತು.
ಮುಂಬೈ, ಮಾರ್ಚ್ 9: ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಮುಂಬೈ ಬಿಲ್ಲವರ ಅಸೋಸಿಯೇಶನ್ ವತಿಯಿಂದ ಥಾಣೆ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಆಯ್ಕೆಯಾದ ಮೀನಾಕ್ಷಿ ಪೂಜಾರಿಯವರನ್ನು ಸನ್ಮಾನಿಸಲಾಯಿತು.
ಬಿಲ್ಲವ ಅಸೋಸಿಯೇಶನ್ ಮಹಿಳಾ ವಿಭಾಗ ಸಾಂತಕ್ರೂಜ್ ನಲ್ಲಿರುವ ಬಿಲ್ಲವ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೀನಾಕ್ಷಿ ಪೂಜಾರಿಯವರನ್ನು ಗೌರವಿಸಲಾಯಿತು. ಇದೇ ವೇಳೆ ಬೃಹನ್ಮುಂಬಯಿ ಮಹಾನಗರ ಪಾಲಿಕೆ ಸದಸ್ಯರಾಗಿ ಚುನಾಯಿತರಾದ ಜಗದೀಶ್ ಕೆ.ಅಮೀನ್ ಅವರನ್ನೂ ಅಸೋಸಿಯೇಶನ್ ಪರವಾಗಿ ಸನ್ಮಾನಿಸಲಾಯಿತು.[ಥಾಣೆ ಪಾಲಿಕೆಯಲ್ಲಿ ಕನ್ನಡತಿ ಮೀನಾಕ್ಷಿ ಪೂಜಾರಿ ದರ್ಬಾರ್]

ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ, ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ , ಬಿಲ್ಲವರ ಅಸೋಸಿಯೇಶನ್ ಮುಂಬೈ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಮತ್ತು ಪದಾಧಿಕಾರಿಗಳು ಪೇಟ ತೊಡಿಸಿ, ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕ ಪತ್ರವನ್ನಿತ್ತು ಸನ್ಮಾನಿಸಿದರು.












Click it and Unblock the Notifications