ರತನ್ ಟಾಟಾ ಕಾರಿನ ನಂಬರ್ ಪ್ಲೇಟ್ ದುರ್ಬಳಕೆ, ಮಹಿಳೆ ವಿರುದ್ಧ ಎಫ್‌ಐಆರ್ ದಾಖಲು
ಮುಂಬೈ, ಜನವರಿ 06: ಖ್ಯಾತ ಉದ್ಯಮಿ ರತನ್ ಟಾಟಾ ಅವರ ಕಾರಿನ ನಂಬರ್‌ನ್ನು ಯಾರೋ ದುರ್ಬಳಕೆ ಮಾಡಿಕೊಂಡ ಪರಿಣಾಮ ಸಂಚಾರಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ರತನ್ ಟಾಟಾ ಅವರ ಕಚೇರಿಗೆ ನೋಟಿಸ್ ಕಳುಹಿಸಿದ್ದ ಘಟನೆ ನಡೆದಿದೆ.
ರತನ್ ಅವರ ಎಂಎಚ್ 01 ಡಿಕೆ 0111 ನಂಬರ್‌ನ ಕಾರು ಸಂಚಾರಿ ನಿಯಮ ಉಲ್ಲಂಘಿಸಿದೆ ಎಂದು ನೋಟಿಸ್ ನೀಡಿದ್ದರು, ಆದರೆ ಕಚೇರಿ ಸಿಬ್ಬಂದಿ ಆರೋಪವನ್ನು ತಳ್ಳಿ ಹಾಕಿ ರತನ್ ಅವರು ಅಂದು ಎಲ್ಲಿಯೂ ಹೋಗಿರಲಿಲ್ಲ ಎಂದು ಹೇಳಿದ್ದಾರೆ.
ಗೊಂದಲಕ್ಕೆ ಒಳಗಾದ ಪೊಲೀಸರು ತನಿಖೆ ಕೈಗೊಂಡು, ಸಿಸಿಟಿವಿ ಪೂಟೇಜ್ ನೋಡಿದಾಗ, ಮುಂಬೈನ ಮಾತುಂಗ ಫೈವ್ ಗಾರ್ಡನ್ ಪ್ರದೇಶದಿಂದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮಹಿಳೆಯೊಬ್ಬರು ನಂಬರ್ ಪ್ಲೇಟ್ ಬದಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ.

ಅನಾರೋಗ್ಯಕ್ಕೀಡಾದ ಮಾಜಿ ಉದ್ಯೋಗಿಯ ಆರೋಗ್ಯ ವಿಚಾರಿಸುವುದಕ್ಕಾಗಿ ಕೈಗಾರಿಕೋದ್ಯಮಿ ರತನ್ ಟಾಟಾ ಮುಂಬೈ ನಿಂದ ಪುಣೆಗೆ ತೆರಳಿದ್ದು, ಅವರ ನಡೆಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗತೊಡಗಿದೆ.
ಯೋಗೇಶ್ ದೇಸಾಯಿ ಎಂಬುವವರು ಲಿಂಕ್ಡ್ ಇನ್ ನಲ್ಲಿ ಈ ಘಟನೆಯನ್ನು ಹಂಚಿಕೊಂಡಿದ್ದು, ಈ ಘಟನೆ ವೈರಲ್ ಆಗತೊಡಗಿದೆ.
ಕಳೆದ 2 ವರ್ಷಗಳಿಂದ ಉದ್ಯೋಗಿಗೆ ಆರೋಗ್ಯ ಸರಿ ಇಲ್ಲ ಎಂಬ ಮಾಹಿತಿ ರತನ್ ಟಾಟಾಗೆ ತಲುಪಿದ್ದು, ತಕ್ಷಣವೇ ಉದ್ಯೋಗಿ ವಾಸಿಸುತ್ತಿದ್ದ ಪುಣೆಯಲ್ಲಿರುವ ಫ್ರೆಂಡ್ಸ್ ಸೊಸೈಟಿಗೆ ಭೇಟಿ ನೀಡಿ ಉದ್ಯೋಗಿಯ ಆರೋಗ್ಯ ವಿಚಾರಿಸಿದ್ದಾರೆ.
ಯೋಗೀಶ್ ಅವರು ರತನ್ ಟಾಟಾ ಉದ್ಯೋಗಿಯೊಂದಿಗೆ ಮಾತನಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಇಂಟರ್ ನೆಟ್ ನಲ್ಲಿ ವೈರಲ್ ಆಗತೊಡಗಿದ್ದು ರತನ್ ಟಾಟಾ ಅವರ ನಡೆಯ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗತೊಡಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications