• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕನಿಂದ ರಾಜ್ಯಪಾಲರಿಗೆ ಪತ್ರ

|
Google Oneindia Kannada News

ಮುಂಬೈ, ಸೆಪ್ಟೆಂಬರ್ 25: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೊಬ್ಬರು ರಾಜ್ಯಪಾಲರಿಗೆ ಪತ್ರಬರೆದಿದ್ದಾರೆ.

ಮಹಾರಾಷ್ಟ್ರದ ಮಹಾವಿಕಾಸ ಅಘಡಿ ಮೈತ್ರಿ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್‌ನ ಶಾಸಕ ವಿಶ್ವಬಂಧು ರಾಯ್ ಅವರು ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಪ್ರಾದೇಶಿಕ ಪಕ್ಷವೊಂದರ ಮುಖ್ಯಸ್ಥರು, ಅವರ ಆಲೋಚನೆಗಳು ಪ್ರಾದೇಶಿಕವಾದವನ್ನು ಪ್ರತಿಪಾದಿಸುತ್ತದೆ, ಸಾಕಿನಾಕ ಅತ್ಯಾಚಾರ ಪ್ರಕರಣದಲ್ಲಿ ಬೇರೆ ರಾಜ್ಯದವರನ್ನು ಅವರು ಗುರಿಯಾಗಿಸುತ್ತಾರೆ. ಅವರ ನಿಲುವು ತಮ್ಮ ವೋಟ್ ಬ್ಯಾಂಕ್ ಅನ್ನು ಸಂತುಷ್ಟಗೊಳಿಸುವುದೇ ಆಗಿರುತ್ತದೆ ಎಂದು ರಾಯ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದ ಸಾಕಿನಾಕ ಎಂಬಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ, ಪ್ರಕರಣದಲ್ಲಿ ಮಹಾರಾಷ್ಟ್ರ ಸರ್ಕಾರ ತಳೆದಿರುವ ನಿಲುವನ್ನು ಅವರು ಆಕ್ಷೇಪಿಸಿದ್ದಾರೆ.

ಮಹಿಳೆಯರ ಮೇಲಿನ ಇತ್ತೀಚಿನ ದೌರ್ಜನ್ಯ, ಅಪರಾಧ ಪ್ರಕರಣವು ಮಹಾರಾಷ್ಟ್ರದ ಸಂಸ್ಕೃತಿಯ ಮೇಲಿನ ದಾಳಿ ಮತ್ತು ಕಳಂಕ ಎಂದು ಸಾಮ್ನಾದ ಸಂಪಾದಕೀಯದಲ್ಲಿ ಶಿವಸೇನೆ ಬರೆದುಕೊಂಡಿತ್ತು.

ಈ ವಿಚಾರ ಮಹಾರಾಷ್ಟ್ರದಲ್ಲಿ ಚರ್ಚೆ, ವಾದ-ವಿವಾದ ಹುಟ್ಟು ಹಾಕಿದೆ, ಅಪರಾಧಿ ಅಪರಾಧಿಯೇ ಯಾವುದೇ ರಾಜ್ಯದ ಹಿನ್ನೆಲೆಯಲ್ಲಿ ನೋಡಬಾರದು ಎಂಬ ಟೀಕೆಗಳು ವ್ಯಕ್ತವಾಗಿವೆ.

ಅತ್ಯಾಚಾರ ಪ್ರಕರಣದ ಕುರಿತಂತೆ ಶಿವಸೇನೆಯ ಸಾಮ್ನಾದಲ್ಲಿ ಸಂಪಾದಕೀಯ ಬರೆದಿತ್ತು. ಅದರಲ್ಲಿಆರೋಪದ ಬಗ್ಗೆ ಪ್ರಸ್ತಾಪಿಸುತ್ತಾ, ಸಂತ್ರಸ್ತೆಯನ್ನು ರಕ್ಷಿಸಲು ವೈದ್ಯರು ಸಾಕಷ್ಟು ಪ್ರಯತ್ನಿಸಿದರು. ಆದರೆ ಆಕೆ ಮೃತಪಟ್ಟರು. ಆರೋಪಿಯನ್ನು ಉತ್ತರ ಪ್ರದೇಶದ ಜಾನ್ಪುರದಮೋಹನ್ ಚೌಹಾಣ್ ಎಂದು ಗುರುತಿಸಲಾಗಿದೆ.

ಸಾಕಿನಾಕ ಅತ್ಯಾಚಾರ ಘಟನೆ ಮಾಸುವ ಮುನ್ನವೇ ಮಹಾರಾಷ್ಟ್ರದ ಥಾಣೆಯಲ್ಲಿ ಮತ್ತೊಂದು ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಕಳೆದ ಏಂಟು ತಿಂಗಳಿನಿಂದ ಸರಿ ಸುಮಾರು 30ಕ್ಕೂ ಹೆಚ್ಚು ಮಂದಿ ಹಲವಾರು ಬಾರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಕಳೆದ ಜನವರಿಯಿಂದ ಸೆಪ್ಟೆಂಬರ್​ವರೆಗೂ ಅನೇಕ ಮಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಸದ್ಯ 24 ಜನರ ಬಂಧಿಸಿದ್ದು, ಇಬ್ಬರು ಅಪ್ರಾಪ್ತರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಬಾಯ್ ಫ್ರೆಂಡ್​ ಜನವರಿಯಲ್ಲಿ ಅತ್ಯಾಚಾರ ಎಸಗಿದ್ದ. ಈ ಘಟನೆಯನ್ನು ಆತ ವಿಡಿಯೋದಲ್ಲಿ ಸೆರೆ ಹಿಡಿದಿದ್ದ. ಈ ವಿಡಿಯೋವನ್ನು ತೋರಿಸಿ ಆತನ ಸ್ನೇಹಿತರು ಮತ್ತು ಪರಿಚಯಸ್ಥರು ಆಕೆಗೆ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ.

ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ನಡೆಸಿದಾಗಿನಿಂದ ಆಕೆಯ ಮೇಲೆ ನಿರಂತರ ಅತ್ಯಾಚಾರ ಆಗಿದೆ. ಆತನ ಸ್ನೇಹಿತರು ಬಾಲಕಿ ಮೇಲೆ ಥಾಣೆಯ ಡೊಂಬಿವಿಲಿ, ಬದ್ಲಾಪುರ, ಮುರ್ಬಾದ್ ಮತ್ತು ರಬಾಲೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕನಿಷ್ಠ ನಾಲ್ಕರಿಂದ ಐದು ಬಾರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು ದತ್ತಾತ್ರಯ್ ಕರಾಳೆ ತಿಳಿಸಿದ್ದಾರೆ.

ಪ್ರಕರಣ ಕುರಿತು ಕಡೆಗೂ ಬಾಲಕಿ ದೂರು ದಾಖಲಿಸಿದ್ದು, ಬಾಲಕಿಯ ದೂರಿನ ಆಧಾರದ ಮೇಲೆ ಕಲ್ಯಾಣದ ಡೊಂಬಿವಲಿಯಲ್ಲಿರುವ ಮನ್ಪದ ಪೊಲೀಸರು 33 ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 376 (ಎನ್) (ಪುನರಾವರ್ತಿತ ಅತ್ಯಾಚಾರ), 376 (ಡಿ) (ಸಾಮೂಹಿಕ ಅತ್ಯಾಚಾರ) ಹಾಗೂ 376 (3) (ಹದಿನಾರು ವರ್ಷದೊಳಗಿನ ಮಹಿಳೆಯ ಮೇಲೆ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆಗಾಗಿ ಎಸಿಪಿ ಸೋನಾಲಿ ಧೋಲೆ ಅವರ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಘಟನೆ ಕುರಿತು 33 ವ್ಯಕ್ತಿಗಳ ಕುರಿತು ತಿಳಿಸಿದ್ದಾಳೆ. . ಈ ಪೈಕಿ 24 ಜನರನ್ನು ಬಂಧಿಸಲಾಗಿದೆ ಜೊತೆಗೆ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

English summary
Recently, Shiv Sena which is heading the Mahavikas Aghadi government in Maharashtra in its editorial Saamna had said a deeper probe into the brutal rape and murder of a woman in suburban Sakinaka will show how much "dirt" the ''Jaunpur pattern'' has created in Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X