• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುಂಬೈನಲ್ಲೇ 10,000 ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

|

ಮುಂಬೈ, ಮೇ.06: ನೊವೆಲ್ ಕೊರೊನಾ ವೈರಸ್ ಸೋಂಕಿಗೆ ಭಾರತದ ವಾಣಿಜ್ಯ ನಗರಿ ಎನಿಸಿರುವ ಮಹಾರಾಷ್ಟ್ರ ಮುಂಬೈ ಅಕ್ಷರಶಃ ನಲುಗಿ ಹೋಗಿದೆ. ಮಹಾಮಾರಿ ಕೊವಿಡ್-19 ನಂಟು ಬೆಳೆಸಿಕೊಂಡವರ ಸಂಖ್ಯೆ 10 ಸಾವಿರದ ಗಡಿ ದಾಟಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 769 ಜನರಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದ್ದು, ಒಂದೇ ದಿನ 25 ಮಂದಿಗೆ ಕೊರೊನಾದಿಂದ ಪ್ರಾಣ ಬಿಟ್ಟಿದ್ದಾರೆ.

ಕೊರೊನಾ ಪರಿಣಾಮ: ಹಲವು ರಾಜ್ಯಗಳಲ್ಲಿ ನಿರುದ್ಯೋಗ ಪ್ರಮಾಣ ಏರಿಕೆ

ಮುಂಬೈನಲ್ಲಿ ಇದುವರೆಗೂ 10,527 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಡೆಡ್ಲಿ ವೈರಸ್ ನಿಂದ ಪ್ರಾಣ ಬಿಟ್ಟವರ ಸಂಖ್ಯೆ 412ಕ್ಕೆ ಏರಿಕೆಯಾಗಿದೆ. ಇನ್ನು, ಬುಧವಾರದ ಅಂಕಿ-ಅಂಶಗಳ ಪ್ರಕಾರ 2,287 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಮಂದಿಗೆ ಸೋಂಕು:

ಮಹಾರಾಷ್ಟ್ರದಲ್ಲಿ ಬುಧವಾರದ ಅಂಕಿ-ಅಂಶಗಳ ಪ್ರಕಾರ ನೊವೆಲ್ ಕೊರೊನಾ ವೈರಸ್ ನಿಂದ 34 ಮಂದಿ ಬಲಿಯಾಗಿದ್ದು, ಒಂದೇ ದಿನ 1,233 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಇದುವರೆಗೂ 651 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, ಸೋಂಕಿತರ ಸಂಖ್ಯೆ 16,758ಕ್ಕೆ ಏರಿಕೆಯಾಗಿದೆ. ಇನ್ನು, ಇದುವರೆಗೂ 3,094 ಕೊರೊನಾ ವೈರಸ್ ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

English summary
Mumbai Coronavirus Cases Cross 10,000. 697 New Positive Cases Found, 25 Peoples Death In Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X