Breaking: ಶಿವಸೇನೆ ನಾಯಕ ಸಂಜಯ್ ರಾವತ್ ಇಡಿ ಕಸ್ಟಡಿ ವಿಸ್ತರಣೆ
ಮುಂಬೈ, ಆ.04: ಜಾರಿ ನಿರ್ದೇಶನಾಲಯದ ವಶದಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಕಸ್ಟಡಿಯನ್ನು ಮುಂಬೈ ನ್ಯಾಯಾಲಯ ಸೋಮವಾರದವರೆಗೆ ವಿಸ್ತರಿಸಿದೆ.
ಸೋಮವಾರ (ಆ. 01) ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಂಬೈ ಕೋರ್ಟ್‌ಗೆ ಸಂಜಯ್ ರಾವತ್ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಕೋರ್ಟ್ ಆಗಸ್ಟ್ 4ರ ತನಕ ಇಡಿ ವಶಕ್ಕೆ ನೀಡಿತ್ತು.
ಮತ್ತಷ್ಟು ವಿಚಾರಣೆ ನಡೆಸುವುದಕ್ಕಾಗಿ ಸೋಮವಾರದವರೆಗೆ (ಆಗಸ್ಟ್ 08) ಇಡಿ ಕಸ್ಟಡಿಗೆ ನೀಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಾತ್ರಾ ಚಾವ್ಲ್ ಹಗರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್‌ರನ್ನು ವಿಚಾರಣೆ ನಡೆಸುತ್ತಿದೆ. ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದಾಗ ಸಂಜಯ್ ರಾವತ್ ಹಾಜರಾಗಿರಲಿಲ್ಲ. ಆದ್ದರಿಂದ ಭಾನುವಾರ ಇಡಿ ಅವರ ಮುಂಬೈ ನಿವಾಸದ ಮೇಲೆ ದಾಳಿ ಮಾಡಿತ್ತು.

ಜೂನ್ 28ರಂದು ಸಂಜಯ್ ರಾವತ್‌ಗೆ ಇಡಿ ವಿಚಾರಣೆಗೆ ಆಗಮಿಸುವಂತೆ ಸಮನ್ಸ್ ನೀಡಲಾಗಿತ್ತು. ಪಾತ್ರಾ ಚಾವ್ಲ್ ಹಗರಣದಲ್ಲಿ 1034 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪವಿದ್ದು, ಇಡಿ ಈ ಕುರಿತು ತನಿಖೆ ಮಾಡುತ್ತಿದೆ.












Click it and Unblock the Notifications