ಮುಂಬೈ ಆಸ್ಪತ್ರೆ ಅಗ್ನಿ ದುರಂತ: ಮೃತರ ಸಂಖ್ಯೆ 8 ಕ್ಕೆ ಏರಿಕೆ

ಮುಂಬೈ, ಡಿಸೆಂಬರ್ 18: ಮುಂಬೈಯ ಆಸ್ಪತ್ರೆಯೊಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ ಎಂಟಕ್ಕೇರಿದೆ. ಘಟನೆಯಲ್ಲಿ ನೂರಾರು ಜನರನ್ನು ರಕ್ಷಣೆ ಮಾಡಲಾಗಿದೆಯಾದರೂ, ಗಂಭೀರ ಗಾಯಗೊಂಡಿರುವ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಅಂಧೇರಿ ಉಪನಗರದ ಮರೋಲ್ ನಲ್ಲಿರುವ ಸರಕಾರ ನಡೆಸುವ ಇಎಸ್ ಐಸಿ ಕಾಮ್ ಗರ್ ಆಸ್ಪತ್ರೆಯಲ್ಲಿ ಸೋಮವಾರದ ಸಂಜೆ ನಾಲ್ಕು ಗಂಟೆ ಹೊತ್ತಿಗೆ ಅಗ್ನಿ ಆಕಸ್ಮಿಕ ಸಂಭವಿಸಿತ್ತು. ಘಟನೆಯಲ್ಲಿ ಐದು ಜನ ಮೃತರಾಗಿದ್ದರು. ಆದರೆ ಇದೀಗ ಮೃತರ ಸಂಖ್ಯೆ ಎಂಟಕ್ಕೆ ಏರಿದೆ.

Mumbai hospital Fire accident: Death toll rises

ಸುಮಾರು 146 ಕ್ಕೂ ಜನರಿಗೆ ಗಾಯವಾಗಿದೆ ಎಂದು ಮೂಲಗಳು ತಿಳಿಸಿದ್ದು, 21 ಜನರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ 5 ತಿಂಗಳ ಮಗುವೂ ಮೃತವಾಗಿದ್ದು, ಮಗುವಿನ ಗುರುತು ಪತ್ತೆಯಾಗಿಲ್ಲ.ಇಂದು ಸಹ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 7 ಅಂತಸ್ತಿನ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ರಬ್ಬರ್ ನಂಥ ಕೆಲವು ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು. ಬೆಂಕಿ ಇಲ್ಲಿಂದಲೇ ಆರಂಭವಾಗಿದೆ ಎನ್ನಲಾಗುತ್ತಿದ್ದು, ತನಿಖೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+