16ನೇ ಮಹಡಿಯಿಂದ ಜಿಗಿದು ಮಾಡೆಲ್ ಆತ್ಮಹತ್ಯೆ
ಮುಂಬೈ, ಸೆ.22: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರೂಪದರ್ಶಿಯೊಬ್ಬಳು ತನ್ನ ಅಪಾರ್ಟ್ಮೆಂಟ್ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಮುಂಬೈನ ಓಶಿವಾರದಲ್ಲಿರುವ ತನ್ನ ಅಪಾರ್ಟ್ಮೆಂಟ್ ನ 16ನೇ ಮಹಡಿ ಮೇಲಿಂದ ಕೆಳಗೆ ಹಾರಿ ರೂಪದರ್ಶಿ ಏಕ್ತಾ ಬಬ್ಬರ್ ಪ್ರಾಣ ಕಳೆದುಕೊಂಡಿದ್ದಾಳೆ. ಬಹುಕಾಲದಿಂದ ಆಕೆ ಮಾನಸಿಕ ಖಿನ್ನತೆಗೆ ಒಳಪಟ್ಟಿದ್ದಳು, ಸರಿಯಾದ ಆಫರ್ ಗಳು ಸಿಕ್ಕಿರಲಿಲ್ಲ ಎನ್ನಲಾಗಿದೆ.

ಕೂಪರ್ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ವೈದ್ಯಕೀಯ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರು ತಿಂಗಳ ಹಿಂದೆಯಷ್ಟೇ ಏಕ್ತಾ ಅವರು ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ಇದರಿಂದ ತೀವ್ರವಾಗಿ ನೊಂದಿದ್ದರು ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.











Click it and Unblock the Notifications