ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈನಲ್ಲಿ ಕೊವಿಡ್-19 ಭೀತಿ ನಡುವೆ ಮಲ್ಟಿಪ್ಲೆಕ್ಸ್ ಪುನಾರಂಭ?

|
Google Oneindia Kannada News

ಮುಂಬೈ, ಜುಲೈ.14: ಕೊರೊನಾವೈರಸ್ ಸೋಂಕು ಹರಡುವಿಕೆಯ ಅಟ್ಟಹಾಸದ ನಡುವೆಯೂ ಮಲ್ಟಿಪ್ಲೆಕ್ಸ್ ಗಳನ್ನು ತೆರೆಯುವುದಕ್ಕೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರವು ಅನುಮತಿ ನೀಡುತ್ತದೆಯಾ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ.

ಇದಕ್ಕೆ ಪೂರಕವಾಗುವಂತೆ ಮುಂಬೈನ ಮಲ್ಟಿಪ್ಲೆಕ್ಸ್ ಗಳಲ್ಲಿ ಸೇವೆ ಆರಂಭಿಸುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡುತ್ತಾ ಶುದ್ಧಗೊಳಿಸುತ್ತಿರುವುದು ಕಂಡು ಬಂದಿದೆ.

ಸ್ನಾತಕೋತ್ತರ ಪದವಿ ಪರೀಕ್ಷೆ ರದ್ದುಗೊಳಿಸಲು 'ಇದೊಂದು' ಕಾರಣ ಸಾಕಾ?ಸ್ನಾತಕೋತ್ತರ ಪದವಿ ಪರೀಕ್ಷೆ ರದ್ದುಗೊಳಿಸಲು 'ಇದೊಂದು' ಕಾರಣ ಸಾಕಾ?

ಮಲ್ಟಿಪ್ಲೆಕ್ಸ್ ನ ಚೀಫ್ ಆಪರೇಟಿಂಗ್ ಆಫೀಸರ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಮುಂಬೈನ ಮಲ್ಟಿಪ್ಲೆಕ್ಸ್ ‌ಗಳಲ್ಲಿ ಸೇವೆಗಳನ್ನು ಪುನರಾರಂಭಿಸಲು ಕಾಯುತ್ತಿದ್ದು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿ ಸೇರಿದಂತೆ ಶಿಸ್ತುಬದ್ಧ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Mumbai Multiplexes Resumption Of Their Services Amid Coronavirus Spreading

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಕಂಡೀಷನ್:

ಕೊರೊನಾವೈರಸ್ ಸೋಂಕಿನ ಅಟ್ಟಹಾಸಕ್ಕೆ ನಲುಗಿದ ಮೊಟ್ಟ ಮೊದಲ ರಾಜ್ಯವೇ ಮಹಾರಾಷ್ಟ್ರ. ಅತಿಹೆಚ್ಚು ಸೋಂಕಿತರು ಮತ್ತು ಸಾವಿನ ಪ್ರಮಾಣವನ್ನು ಹೊಂದಿರುವ ರಾಜ್ಯದಲ್ಲಿ ರಾಜಧಾನಿ ಮುಂಬೈನ ಸ್ಥಿತಿಯು ತೀರಾ ಕೆಟ್ಟದಾಗಿದೆ. ಮಹಾರಾಷ್ಟ್ರದಲ್ಲಿ 2,60,924ಕ್ಕೂ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 1,44,507 ಮಂದಿ ಗುಣಮುಖರಾಗಿದ್ದಾರೆ. 1,05,638 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದುವರೆಗೂ ರಾಜ್ಯದಲ್ಲಿ ಮಹಾಮಾರಿಗೆ 10482 ಮಂದಿ ಮೃತಪಟ್ಟಿದ್ದಾರೆ.

English summary
Mumbai Multiplexes Resumption Of Their Services Amid Coronavirus Spreading?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X