Breaking; ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಮುಂಬೈ, ಜುಲೈ 19; ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧಿಸಲಾಗಿದೆ.

ಸೋಮವಾರ ರಾತ್ರಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧಿಸಿದ್ದಾರೆ. 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್‌ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.

Mumbai Police Arrested Shilpa Shetty Husband Raj Kundra

ಅಶ್ಲೀಲ ವಿಡಿಯೋಗಳನ್ನು ಮಾಡಿ ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಆರೋಪದ ಮೇಲೆ ರಾಜ್ ಕುಂದ್ರಾ ಬಂಧನವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ರಾಜ್ ಕುಂದ್ರಾ ಬಂಧಿಸಿದ್ದಾರೆ.

ರಾಜ್ ಕುಂದ್ರಾ ಬಂಧನದ ಕುರಿತು ಮುಂಬೈ ಪೊಲೀಸರು ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಕುರಿತು ಪ್ರಕರಣ ದಾಖಲಾಗಿತ್ತು.

ಮುಂಬೈ ಅಪರಾಧ ವಿಭಾಗದಲ್ಲಿ 2021ರ ಫೆಬ್ರವರಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 19/7/2021ರಂದು ರಾಜ್ ಕುಂದ್ರಾ ಬಂಧಿಸಲಾಗಿದೆ. ವಿಡಿಯೋ ತಯಾರಿಕೆಯಲ್ಲಿ ಅವರ ಪಾತ್ರವಿರುವ ಕುರಿತು ನಮ್ಮ ಬಳಿ ಸಾಕ್ಷ್ಯಗಳಿವೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+