• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಟ ಸುಶಾಂತ್ ಶವದ ಫೋಟೋ ಹಂಚಿಕೊಳ್ಳುವವರ ವಿರುದ್ಧ ಕ್ರಮ

|

ಮುಂಬೈ, ಜೂನ್ 15: ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಶವದ ಫೋಟೋ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸಬಹುದು ಎಂದು ಮುಂಬೈ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ತನ್ನದೇ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಸುಶಾಂತ್ ಶವವನ್ನು ಕೆಳಗೆ ಇಳಿಸಿದ್ದರು. ಈ ವೇಳೆ ಕ್ಲಿಕ್ಕಿಸಲಾಗಿರುವ ಸುಶಾಂತ್ ಸಿಂಗ್ ಶವದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಟ ಸುಶಾಂತ್ ಸಿಂಗ್ ಸಾವಿಗೆ 'Asphyxia' ಕಾರಣ ಎಂದ ಮರಣೋತ್ತರ ಪರೀಕ್ಷೆ ವರದಿ

ಟ್ವಿಟ್ಟರ್, ಫೆಸ್‌ಬುಕ್ ಹಾಗೂ ವಾಟ್ಸಾಪ್‌ಗಳಲ್ಲಿ ಸುಶಾಂತ್ ಶವದ ಫೋಟೋ ಹರಿದಾಡುತ್ತಿದೆ. ಈ ಬಗ್ಗೆ ಮುಂಬೈ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸುಶಾಂತ್ ಅವರ ಶವದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬೇಡಿ ಎಂದು ವಿನಂತಿಸಿದ್ದಾರೆ.

ನಟ ಶವದ ಫೋಟೋ ಶೇರ್ ಮಾಡುವುದು 'ಕೆಟ್ಟ ಅಭಿರುಚಿ' ಎಂದು ಹೇಳಿರುವ ಪೊಲೀಸರು, ಅಂತಹ ಚಿತ್ರಗಳನ್ನು ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸಬೇಕಾದ ಅನಿವಾರ್ಯತೆ ಬರಬಹುದು ಎಂದು ಎಚ್ಚರಿಸಿದ್ದಾರೆ.

34 ವರ್ಷದ ಯುವ ನಟನ ದಿಢೀರ್ ಸಾವು ಇಡೀ ಚಿತ್ರರಂಗಕ್ಕೆ ಆಘಾತ ತಂದಿದೆ. ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಟನ ಮರಣೋತ್ತರ ಪರೀಕ್ಷೆಯ ವರದಿಯೂ ಮುಗಿದಿದ್ದು, ಇದರಲ್ಲೂ ಆತ್ಮಹತ್ಯೆ ಎಂದು ಖಚಿತವಾಗಿದೆ.

English summary
Mumbai cyber police ask netizens not to post bollywood actor Sushant Singh Rajput dead body photo, who was found hanging in his apartment in Mumbai's Bandra area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X