ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರ್ನಬ್ ಗೋಸ್ವಾಮಿ ಪತ್ನಿ ಹಾಗೂ ಪುತ್ರನ ಮೇಲೆ ಪ್ರಕರಣ ದಾಖಲು

|
Google Oneindia Kannada News

ಮುಂಬೈ, ನವೆಂಬರ್ 04: ಈಗಾಗಲೇ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯವರನ್ನು ಬಂಧಿಸಿ ಕರೆತರುವಾಗ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದರು ಎನ್ನುವ ಕಾರಣಕ್ಕೆ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.

ಹಾಗೆಯೇ ಅರ್ನಬ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಅರ್ನಬ್ ಅವರ ಪತ್ನಿ ಹಾಗೂ ಪುತ್ರನ ಮೇಲೂ ಪ್ರಕರಣ ದಾಖಲಾಗಿದೆ.

ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಆರೋಪ: ಅರ್ನಬ್ ವಿರುದ್ಧ ಹೊಸ ಎಫ್‌ಐಆರ್ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಆರೋಪ: ಅರ್ನಬ್ ವಿರುದ್ಧ ಹೊಸ ಎಫ್‌ಐಆರ್

ಇಂಟೀರಿಯರ್ ಡಿಸೈನರ್ ಆಗಿದ್ದ 53 ರ ಹರೆಯದ ಅನ್ವಯ್ ನಾಯಕ್ ಮತ್ತುಅವರ ತಾಯಿ ಕುಮುದ್ ನಾಯಕ್, 2018ರ ಮೇ ತಿಂಗಳಲ್ಲಿ ಆಲಿಬಾಗ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ದೊರೆತ ಪತ್ರದಲ್ಲಿ 'ಅರ್ನಬ್‌ ಗೋಸ್ವಾಮಿ, ಫಿರೋಜ್ ಶೇಖ್ ಮತ್ತು ನಿತೀಶ್ ಸರ್ದಾ ಅವರು 5.40 ಕೋಟಿ ರೂಪಾಯಿ ಪಾವತಿಸಿಲ್ಲ.

Mumbai Police Files Case Against Arnab Goswamis Wife And Son

ಎಂದು ಗಂಭೀರ ಆರೋಪ ಮಾಡಲಾಗಿತ್ತು.ಪೊಲೀಸರ ತಂಡ ಬೆಳಗ್ಗೆ ಮುಂಬೈನಲ್ಲಿರುವ ಅರ್ನಬ್ ಅವರ ನಿವಾಸ ಪ್ರವೇಶಿಸಿದ್ದಾಗ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯನಿರತ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ, ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನೊಂದೆಡೆ ತಮ್ಮನ್ನು ಬಂಧಿಸುವ ಮುನ್ನ ಪೊಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿ ಪ್ರಚೋದನೆ ನೀಡಿದ್ದರು ಎಂಬ ಆರೋಪದ ಮೇಲೆ ಇಂದು ಬೆಳಗ್ಗೆ ಅವರ ನಿವಾಸಕ್ಕೆ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು.

ರಾಯ್ ಗಢ ಜಿಲ್ಲೆಯ ಅಲಿಬೌಗ್ ಪೊಲೀಸ್ ಠಾಣೆಗೆ ಪೊಲೀಸ್ ವಾಹನದಲ್ಲಿ ಕರೆತರುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ನಬ್ ಗೋಸ್ವಾಮಿ, ನನ್ನ ಮೇಲೆ ಪೊಲೀಸರು ದೈಹಿಕ ಹಲ್ಲೆ ನಡೆಸಿದ್ದಾರೆ ಎಂದರು.

ಆದರೆ ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡುತ್ತಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮಖ್ ಹೇಳುತ್ತಾರೆ. ಕಾನೂನಿಗಿಂತ ಮೇಲೆ ಯಾರೂ ಅಲ್ಲ, ಮಹಾರಾಷ್ಟ್ರ ಪೊಲೀಸರು ಕಾನೂನು ಪ್ರಕಾರ ನಡೆದುಕೊಳ್ಳುತ್ತಾರೆ ಎಂದರು.

ಅರ್ನಬ್ ಗೋಸ್ವಾಮಿ ತಮಗೆ ಬಾಕಿ ಹಣವನ್ನು ನೀಡಿರಲಿಲ್ಲ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು 2018ರ ಮೇ ತಿಂಗಳಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಪ್ರಕರಣ ಸಂಬಂಧ ಅರ್ನಬ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.

English summary
The Mumbai Police has registered an FIR against Republic TV's Editor in Chief Arnab Goswami for allegedly manhandling a woman police officer at the time of his arrest on Wednesday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X