• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ನಿಯಮ ಉಲ್ಲಂಘಿಸಿದರೆ 200ರೂ ದಂಡದ ಜೊತೆ ಮಾಸ್ಕ್ ಉಚಿತ!

|

ಮುಂಬೈ, ಫೆಬ್ರವರಿ.22: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಹೆಚ್ಚುತ್ತಿದೆ. ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿರುವ ಜಿಲ್ಲೆಗಳಲ್ಲಿ ಈಗಾಗಲೇ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿ ಒಂದು ಕಡೆ ಕೊವಿಡ್-19 ಸೋಂಕಿತ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳುತ್ತಿಲ್ಲ. ಸರ್ಕಾರದ ಮಾರ್ಗಸೂಚಿ ಮತ್ತು ಕೊರೊನಾವೈರಸ್ ಶಿಷ್ಟಾಚಾರ ಪಾಲನೆ ಮಾಡದೇ ಸಾಮಾಜಿಕ ಅಂತರವನ್ನು ತೊರೆದು ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಜನರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ.

ಮುಂಬೈ ನಗರದ ಮಾರುಕಟ್ಟೆಗಳಲ್ಲಿ ಮಾಸ್ಕ್ ಹಾಕಿಕೊಳ್ಳದೇ ಇರುವ ಸಾರ್ವಜನಿಕರಿಗೆ ಪೊಲೀಸರು 200 ರೂಪಾಯಿ ದಂಡವನ್ನು ವಿಧಿಸುತ್ತಿದ್ದಾರೆ. ಇದರ ಜೊತೆಗೆ ದಂಡ ಪಾವತಿಸಿದ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ಗಳನ್ನು ವಿತರಣೆ ಮಾಡಲಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ "ಮಹಾ" ಆತಂಕ!

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 6971 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 21,00,884ಕ್ಕೆ ಏರಿಕೆಯಾಗಿದೆ. ಒಂದೇ ದಿನ 35 ಮಂದಿಗ ಮಹಾಮಾರಿಗೆ ಬಲಿಯಾಗಿದ್ದು, ಈವರೆಗೂ 51788 ಮಂದಿ ಪ್ರಾಣ ಬಿಟ್ಟಿದ್ದಾರೆ. 2417 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 19,94,947 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 52,956 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಹೀಗೆ ಏಕಾಏಕಿ ಕೊರೊನಾ ಸೋಂಕು ಹೆಚ್ಚಾಗಲು ಕಾರಣವೇನು?

ಮಹಾರಾಷ್ಟ್ರ ಲಾಕ್ ಡೌನ್ ಎಚ್ಚರಿಕೆ:

"ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸುವುದಕ್ಕೆ ನೀವು ಬಯಸುತ್ತೀರಾ. ಮುಂದಿನ ಎಂಟು ದಿನಗಳಲ್ಲಿ ನೀವು ಮಾಸ್ಕ್ ಧರಿಸದೇ ಅಜಾಗ್ರತಿ ವಹಿಸಿದರೆ ಮತ್ತೊಂದು ಬಾರಿ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ. ಲಾಕ್ ಡೌನ್ ಬೇಡ ಎನ್ನುವುದಾದರೆ ಮಾಸ್ಕ್ ಧರಿಸಿ, ಕೊರೊನಾವೈರಸ್ ನಿಯಮಗಳನ್ನು ಶಿಸ್ತುಬದ್ಧವಾಗಿ ಪಾಲನೆ ಮಾಡುವಂತೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಎರಡನೇ ಅಲೆ ಸೃಷ್ಟಿಯಾಗುತ್ತಿದೆಯೋ ಇಲ್ಲವೋ ಎನ್ನುವುದರ ಬಗ್ಗೆ ಮುಂದಿನ 8 ರಿಂದ 15 ದಿನಗಳಲ್ಲಿ ಸ್ಪಷ್ಟವಾಗಲಿದೆ. ಎರಡನೇ ಅಲೆ ರಾಜ್ಯದಲ್ಲಿ ಸೃಷ್ಟಿಯಾಗಿದೆಯೇ ಎನ್ನುವ ಬಗ್ಗೆ ಜನರು ಸಹ ಜಾಗೃತಿ ವಹಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

English summary
Mumbai Police Gave Mask To Those Who Not Wear Mask, And Also Penalised Rs 200 Fine To Them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X