ಮುಂಬೈನ ತಾಜ್ ಹೋಟೆಲ್ಗೆ ಮತ್ತೆ ಬಾಂಬ್ ಬೆದರಿಕೆ ಕರೆ: FIR ದಾಖಲು
ಮುಂಬೈ, ಜುಲೈ 6: ಮುಂಬೈನ ತಾಜ್ ಹೋಟೆಲ್ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮತ್ತೆ ಸ್ಫೋಟದ ಆತಂಕ ಎದುರಾಗಿದೆ.
ತಾಜ್ ಹೋಟೆಲ್ನಲ್ಲಿ ಉಗ್ರರ ದಾಳಿ ನಡೆದು ಸಾಕಷ್ಟು ವರ್ಷಗಳು ಕಳೆದರೂ ಆ ಭಯ ಜನರಿಂದ ಇನ್ನೂ ದೂರವಾಗಿಲ್ಲ. ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 506( ಕ್ರಿಮಿನಲ್ ಉದ್ದೇಶ) 505 ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಕೊಲಾಬಾ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 2008 ನವೆಂಬರ್ 26 ರಂದು ತಾಜ್ ಹೋಟೆಲ್ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಮಾರಣ ಹೋಮ ನಡೆಸಿದ್ದರು.

ಕರಾಚಿಯಿಂದ ಕರೆ ಮಾಡುತ್ತಿದ್ದು, ತಾನು ಪಾಕಿಸ್ತಾನದ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಸದಸ್ಯನೆಂದು ಪರಿಚಯಿಸಿಕೊಂಡಿದ್ದವ್ಯಕ್ತಿ, ಬಾಂದ್ರಾದಲ್ಲಿನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ ಹಾಗೂ ಕೊಲಾಬಾದಲ್ಲಿನ ತಾಜ್ ಹೋಟೆಲ್ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ. ನಂತರ ಮಂಗಳವಾರ ಹೋಟೆಲ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು.
ಮತ್ತೆ ಬೆದರಿಕೆ ಕರೆ ಬಂದಿವೆ, ಪ್ರಸ್ತುತ ಟಾಟಾ ಗ್ರೂಫ್ ಪ್ರಾಯೋಜಿತ ಇಂಡಿಯನ್ ಹೋಟೆಲ್ ಕಂಪನಿಯಿಂದ ನಡೆಸಲಾಗುತ್ತಿದ್ದ ಹೋಟೆಲ್ ಗಳು ಕೊವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಾಣಿಜ್ಯ ಚಟುವಟಿಕೆಯನ್ನು ನಿಲ್ಲಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications