• search
 • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊವಿಡ್ 19: ಡಿಸೆಂಬರ್ 31ರವರೆಗೂ ಮುಂಬೈನ ಶಾಲೆಗಳು ಬಂದ್

|

ಮುಂಬೈ, ನವೆಂಬರ್ 20: ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳು ಡಿಸೆಂಬರ್ 31ರವರೆಗೆ ಮುಚ್ಚಿರಲಿದೆ. ನಗರದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ಈ ಮೊದಲು ನಿರ್ಧರಿಸಿದಂತೆ ನವೆಂಬರ್ 23 ರಿಂದ ಶಾಲೆಗಳು ಆರಂಭವಾಗಬೇಕಿತ್ತು. ಆದರೆ ಮುಂಬೈನಲ್ಲಿ ಕೊರೊನಾ ಪ್ರಕರಣಗಳು ಮತ್ತಷ್ಟು ಹೆಚ್ಚಾಗುತ್ತಿರುವ ಕಾರಣ ಈಗ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಅಂದಾಜಿಸಲಾಗಿದೆ.

ದೆಹಲಿಯಲ್ಲಿ ಕಡಿಮೆಯಾಗದ ಕೊರೊನಾ ಅಬ್ಬರ, ಮತ್ತೆ 7546 ಪ್ರಕರಣಗಳು ಪತ್ತೆ

ನಗರದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಆರಂಭವಾಗಿದೆ, ಈಗಾಗಲೇ ದೆಹಲಿಯಲ್ಲಿ ಮೂರನೇ ಬಾರಿಗೆ ಸೋಂಕು ಹೆಚ್ಚಳವಾಗುತ್ತಿದೆ. ಮುಂಬೈನಲ್ಲಿ ಗುರುವಾರ 924 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಒಟ್ಟು 2,72,449 ಪ್ರಕರಣಗಳಿವೆ. ಇದುವರೆಗೆ ಮೃತಪಟ್ಟಿರುವವರ ಸಂಖ್ಯೆ 10,624ಕ್ಕೆ ಏರಿದೆ. ಗುರುವಾರ 12 ಮಂದಿ ಸಾವನ್ನಪ್ಪಿದ್ದರು.

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 90 ಲಕ್ಷಕ್ಕೇರಿದೆ. ಅತಿ ಹೆಚ್ಚು ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕದ ನಂತರ ಸ್ಥಾನ ಪಡೆದುಕೊಂಡಿರುವ ಭಾರತದಲ್ಲಿ ಶುಕ್ರವಾರ 45,882 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ.

   Corona ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರ | Oneindia Kannada

   ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,83,397 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,95,91,786 ಕೊವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

   English summary
   All schools under the jurisdiction of the Brihanmumbai Municipal Corporation (BMC) will remain closed till December 31 in view of the rising number of COVID-19 cases in the city. The schools were earlier scheduled to reopen on November 23.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X