ಮುಂಬೈನ ಕೋವಿಡ್ 19 ಆಸ್ಪತ್ರೆಯಲ್ಲಿ ಅಗ್ನಿ ದುರಂತ, ಇಬ್ಬರು ಸಾವು
ಮುಂಬೈ, ಮಾರ್ಚ್ 26: ಮುಂಬೈನ ಕೋವಿಡ್ 19 ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮುಂಬೈಯ ಬಂಡುಪ್ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ವೇಳೆ ಬೆಂಕಿ ದುರಂತವಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಮಾಲ್ ವೊಂದರಲ್ಲಿ ನಡೆಸುತ್ತಿರುವ ಆಸ್ಪತ್ರೆಯಲ್ಲಿ ಬೆಂಕಿ ದುರಂತವುಂಟಾಗಿದ್ದು, ಸುಮಾರು 23 ಅಗ್ನಿ ಶಾಮಕ ದಳಗಳು ಸ್ಥಳದಲ್ಲಿ ಬೆಂಕಿ ನಂದಿಸುವ, ರೋಗಿಗಳನ್ನು ರಕ್ಷಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದು ಡಿಸಿಪಿ ಪ್ರಶಾಂತ್ ಕದಮ್ ತಿಳಿಸಿದ್ದಾರೆ.
ಕೋವಿಡ್-19 ಸೋಂಕಿತರು ದಾಖಲಾಗಿರುವ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದ್ದು ಸುಮಾರು 76 ರೋಗಿಗಳನ್ನು ರಕ್ಷಣೆ ಮಾಡುವ ಕಾರ್ಯ ಮುಂದುವರಿದಿದೆ. 70 ರೋಗಿಗಳನ್ನು ಮತ್ತು ಕೋವಿಡ್ ಸೋಂಕಿತರನ್ನು ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಮುಂಬೈ ಮೇಯರ್ ತಿಳಿಸಿದ್ದಾರೆ.

ಬೆಂಕಿ ಹತ್ತಿ ಉರಿಯಲು ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಲ್ ವೊಂದರಲ್ಲಿ ಆಸ್ಪತ್ರೆ ನಡೆಸುತ್ತಿರುವುದನ್ನು ನಾನು ನೋಡುತ್ತಿರುವುದು ಇದೇ ಮೊದಲ ಸಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.












Click it and Unblock the Notifications