ಮುಂಬೈ ಫ್ಲ್ಯಾಟ್ ನಲ್ಲಿ ಬೆಂಕಿ, ಇಬ್ಬರು ಸಾವು

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮುಂಬೈ, ಅಕ್ಟೋಬರ್ 18: ಇಲ್ಲಿನ ಕಫೆ ಪರೇಡ್ ಬಳಿಯ ಮೇಕರ್ ಟವರ್ ಫ್ಲ್ಯಾಟ್ ನ ಇಪ್ಪತ್ತನೇ ಅಂತಸ್ತಿನಲ್ಲಿ ಬೆಂಕಿ ಅನಾಹುತ ಸಂಭವಿಸಿ, ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 6.45ರ ವೇಳೆಯಲ್ಲಿ ಘಟನೆ ಸಂಭವಿಸಿದ್ದು, ಹದಿನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ. ಒಂದು ವರ್ಷದ ಮಗುವೊಂದನ್ನು ರಕ್ಷಿಸಲಾಗಿದ್ದು, ಅದರ ಸ್ಥಿತಿ ಸ್ಥಿರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ದಳದ ಎಂಟು ವಾಹನ ಸ್ಥಳಕ್ಕೆ ಧಾವಿಸಿ, ಬೆಳಗ್ಗೆ 8.30ರ ವೇಳೆಗೆ ಬೆಂಕಿಯನ್ನು ತಹಬದಿಗೆ ತರಲು ಯಶಸ್ವಿಯಾಯಿತು. ಸಿಬ್ಬಂದಿ ಸ್ಥಳಕ್ಕೆ ತೆರಳುವ ಹೊತ್ತಿಗೆ ಇಬ್ಬರು ಮೃತಪಟ್ಟಿದ್ದರು. ಅದೇ ಅಂತಸ್ತಿನಲ್ಲಿ ಮೃತ ಕುಟುಂಬದ ಏಳು ಮಂದಿ ಸೇರಿ ಒಟ್ಟು ಹದಿನಾಲ್ಕು ಮಂದಿಯನ್ನು ರಕ್ಷಿಸಿದೆವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.[ಭುವನೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ, 24 ಸಾವು]

Mumbai: Two dead in fire at Maker Tower

ಆ ವಾರ್ಡ್ ವ್ಯಾಪ್ತಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಬಜಾಜ್ ಎಲೆಕ್ಟ್ರಿಕಲ್ಸ್ ವ್ಯವಸ್ಥಾಪಕ ನಿರ್ದೇಶಕ ಶೇಖರ್ ಬಜಾಜ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಲೇ ಇದೆ. ಏರ್ ಕಂಡೀಷನರ್ ನಿಂದ ಬೆಂಕಿ ಕಾಣಿಸಿಕೊಂಡು, ವ್ಯಾಪಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ಇಬ್ಬರೂ ಇಪ್ಪತ್ತು-ಇಪ್ಪತ್ತೈದರ ವಯಸ್ಸಿನವರು.[ಹಾಸನದಲ್ಲಿ ಮಾರುತಿ ವ್ಯಾನ್ ಗೆ ಆಕಸ್ಮಿಕ ಬೆಂಕಿ: ಭಸ್ಮ]

ಮೃತರನ್ನು ಫ್ಲ್ಯಾಟ್ ನ ನಿವಾಸಿಗಳು ಗುರುತಿಸಬೇಕಾಗಿದೆ. 'ಮರಣೋತ್ತರ ಪರೀಕ್ಷೆ ನಡೆಯಬೇಕಿದೆ. ಪ್ರಾಥಮಿಕ ತನಿಖೆ ಪ್ರಕಾರ, ಕಾರ್ಬನ್ ಮಾನಾಕ್ಸೈಡ್ ನಿಂದ ಇಬ್ಬರು ಮೃತಪಟ್ಟಿದ್ದಾರೆ. ಅವರಿಗೆ ಆಗಿರುವ ಸುಟ್ಟ ಗಾಯಗಳು ತುಂಬ ಗಂಭೀರವಾದದ್ದಲ್ಲ. ಅವರು ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ ಎಂದು ಪರೀಕ್ಷೆಯಿಂದ ಗೊತ್ತಾಗುತ್ತಿದೆ' ಎಂದು ವೈದ್ಯರು ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Two people died and 14 people were rescued after a major fire broke out in a residential flat on the 20th floor of Maker Tower in Cuffe Parade, Mumbai on Tuesday.
Please Wait while comments are loading...