ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಗೆದ್ದರೂ ನರೇಂದ್ರ ಮೋದಿ ಪ್ರಧಾನಿಯಾಗಲ್ಲ: ಶರದ್ ಪವಾರ್

|
Google Oneindia Kannada News

Recommended Video

Lok Sabha Elections 2019 : ಬಿಜೆಪಿ ಗೆದ್ದರೂ ನರೇಂದ್ರ ಮೋದಿ ಪ್ರಧಾನಿಯಾಗಲ್ಲ: ಶರದ್ ಪವಾರ್ | Oneindia Kannada

ಮುಂಬೈ, ಮಾರ್ಚ್ 13: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು. ಆದರೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ನಾಶ್ನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖಂಡ ಶರದ್ ಪವಾರ್ ಹೇಳಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ 78 ವರ್ಷ ವಯಸ್ಸಿನ ಪವಾರ್, 'ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದಾದರೂ ಅದಕ್ಕೆ ಇನ್ನಿತರ ಪಕ್ಷಗಳು ಬೆಂಬಲ ನೀಡುವುದಿಲ್ಲ. ಆ ಕಾರಣ ಬಹುಮತ ಪಡೆಯಲಾಗದೆ ಅದು ಸರ್ಕಾರ ರಚಿಸುವಲ್ಲಿ ವಿಪಲವಾಗುತ್ತದೆ. ಮತ್ತು ನರೇಂದ್ರ ಮೋದಿ ಅವರು ಪ್ರಧಾನಿ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದಿದ್ದಾರೆ.

ಲೋಕ ಕದನ LIVE: ಮೋದಿ ವಿರುದ್ಧ ವಾರಣಾಸಿಯಲ್ಲಿ ದೀದಿ ರಣಕಹಳೆ?ಲೋಕ ಕದನ LIVE: ಮೋದಿ ವಿರುದ್ಧ ವಾರಣಾಸಿಯಲ್ಲಿ ದೀದಿ ರಣಕಹಳೆ?

ಅಕಸ್ಮಾತ್ ಬಿಜೆಪಿಗೆ ಬೇರೆ ಪಕ್ಷಗಳು ಬೆಂಬಲ ನೀಡಿದರು, ಅವರು ಪ್ರಧಾನಿಯನ್ನಾಗಿ ಮತ್ತೆ ನರೇಂದ್ರ ಮೋದಿ ಅವರನ್ನು ನೇಮಿಸುವುದಾದರೆ ಬೆಂಬಲ ನೀಡುವುದಿಲ್ಲ ಎನ್ನುತ್ತಾರೆ. ಆದ್ದರಿದ ಬಿಜೆಪಿ ಅಧಿಕಾರಕ್ಕೆ ಬಂದರೂ, ಬಾರದೆ ಇದ್ದರೂ ಮೋದಿ ಮತ್ತೆ ಪ್ರಧಾನಿಯಾಗೊಲ್ಲ ಎಂದು ಪವಾರ್ ಹೇಳಿದ್ದಾರೆ.

Narendra Modi will not be PM again even if BJP wins: Sharad Pawar

"2019 ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ 43 ಸ್ಥಾನಗಳನ್ನು ಗೆಲ್ಲಬಹುದು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಅವರೆಲ್ಲೋ ಗೊಂದಲದಲ್ಲಿ ಹೇಳಿದ್ದಿರಬೇಕು. ಎಲ್ಲಾ 48 ಕ್ಷೇತ್ರಗಳನ್ನೂ ಬಿಜೆಪಿಯೇ ಗೆಲ್ಲುತ್ತದೆ ಎಂದಿದ್ದರೆ ಸರಿ ಇರುತ್ತಿತ್ತು" ಎಂದ ಅವರು ವ್ಯಂಗ ಮಾಡಿದರು.

ಲೋಕಸಭಾ ಚುನಾವಣೆಗೆ ಮುನ್ನ ಕೋಡಿಶ್ರೀ ಭವಿಷ್ಯ: ಬಿಜೆಪಿ ಹೊಡೀರೀ ಹಲಗೀ...ಲೋಕಸಭಾ ಚುನಾವಣೆಗೆ ಮುನ್ನ ಕೋಡಿಶ್ರೀ ಭವಿಷ್ಯ: ಬಿಜೆಪಿ ಹೊಡೀರೀ ಹಲಗೀ...

ಏಪ್ರಿಲ್ 11 ರಿಂದ ಆರಂಭವಾಗುವ ಚುನಾವಣೆ ಮೇ 19 ರವರೆಗೆ ಒಟ್ಟು ಏಳು ಹಂತಗಳಲ್ಲಿ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

English summary
BJP may be single kargest party. But Narendra Modi will not be Prime minister, NCP leader Sharad Pawar told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X